More

    ಕುಂಟೋಜಿ ಗ್ರಾಪಂ ಅಧ್ಯಕ್ಷೆ ಲಲಿತಾ

    ಗಜೇಂದ್ರಗಡ: ಸಮೀಪದ ಕುಂಟೋಜಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಲಲಿತಾ ರಾಠೋಡ ಹಾಗೂ ಉಪಾಧ್ಯಕ್ಷೆಯಾಗಿ ಲಕ್ಷ್ಮೀಬಾಯಿ ಪೂಜಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಹಿಂದಿನ ಅಧ್ಯಕ್ಷೆ ರೇಣುಕಾ ಕುಷ್ಟಗಿ ವಿರುದ್ಧ ಅವಿಶ್ವಾಸ ನಿರ್ಣಯ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ಚುನಾವಣೆ ನಿಗದಿಯಾಗಿತ್ತು. ಒಟ್ಟು 13 ಸದಸ್ಯ ಬಲ ಹೊಂದಿದ್ದು, ಕಾಂಗ್ರೆಸ್ ಬೆಂಬಲಿತ 9 ಸದಸ್ಯರು ಈ ವೇಳೆ ಹಾಜರಿದ್ದರು. ಬಿಜೆಪಿ ಬೆಂಬಲಿತ ನಾಲ್ವರು ಗೈರು ಹಾಜರಾಗಿದ್ದರು. ಚುನಾವಣೆ ಪೂರ್ವದಲ್ಲಿ ಲಲಿತಾ ಅವರು ಗ್ರಾಪಂ ಉಪಾಧ್ಯಕ್ಷೆಯಾಗಿದ್ದರು. ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರಿಂದ ತೆರವಾದ ಉಪಾಧ್ಯಕ್ಷೆ ಸ್ಥಾನಕ್ಕೆ ಲಕ್ಷ್ಮೀಬಾಯಿ ಅವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ತಾಪಂ ಇಒ ಸಂತೋಷ ಪಾಟೀಲ ಕಾರ್ಯ ನಿರ್ವಹಿಸಿದರು.

    ಈ ವೇಳೆ ತಾಪಂ ಉಪಾಧ್ಯಕ್ಷ ಶಶಿಧರ ಹೂಗಾರ, ಪುರಸಭೆ ಸದಸ್ಯರಾದ ಮಿಥುನ ಪಾಟೀಲ, ರಾಜು ಸಾಂಗ್ಲೀಕರ, ವೆಂಕಟೇಶ ಮುದಗಲ್, ಶಿವರಾಜ ಘೊರ್ಪಡೆ, ಗ್ರಾಪಂ ಸದಸ್ಯರಾದ ಲಕ್ಷ್ಮವ್ವ ಭಜಂತ್ರಿ, ಲಕ್ಷ್ಮವ್ವ ಗೌಡ್ರ, ರೋಣವ್ವ ಮಾದರ, ನೀಲವ್ವ ಗುರಿಕಾರ, ಸಾವಿತ್ರವ್ವ ದಾಸರ, ದೊಡ್ಡನಗೌಡ ಗೋನಾಳ, ದುರಗಪ್ಪ ಹರಿಜನ ಇದ್ದರು. ಪಿಎಸ್​ಐ ಗುರುಶಾಂತ ದಾಶ್ಯಾಳ ಸೂಕ್ತ ಬಂದೋಬಸ್ತ್ ಒದಗಿಸಿದ್ದರು.

    ಬಳಿಕ ಮಾತನಾಡಿದ ಲಲಿತಾ ರಾಠೋಡ, ಸಿಕ್ಕಿರುವ ಅವಕಾಶ ಸದ್ಭಳಕೆ ಮಾಡಿಕೊಂಡು ಎಲ್ಲ ಸದಸ್ಯರ ವಿಶ್ವಾಸ ಪಡೆದು ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ. ಅಲ್ಲದೆ ಪಕ್ಷವನ್ನು ಬೂತ್ ಮಟ್ಟದಲ್ಲಿ ಬಲಿಷ್ಠಗೊಳಿಸುವುದರೊಂದಿಗೆ ಗ್ರಾಪಂ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮಾಜಿ ಶಾಸಕ ಜಿ.ಎಸ್. ಪಾಟೀಲ ಅವರ ಕೈ ಬಲಪಡಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.

    ವಿಜಯೋತ್ಸವ: ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಎಚ್.ಎಸ್. ಸೋಂಪುರ, ಅರ್ಜುನ ರಾಠೋಡ, ಬಸವರಾಜ ಬಂಕದ, ಎ.ಸಿ. ಪಾಟೀಲ, ಅಂದಪ್ಪ ಬಿಚ್ಚೂರ, ಯಲ್ಲಪ್ಪ ಬಂಕದ, ಎಫ್.ಎಸ್. ಕರಿದುರಗನವರ, ಷಣ್ಮುಖಪ್ಪ ಕರಡಿ, ವೀರೇಶ ರಾಠೋಡ, ಶೇಖಣ್ಣ ಮಾಳೋತ್ತರ, ನೇಮಪ್ಪ ರಾಠೋಡ, ಗಣೇಶ ರಾಠೋಡ, ಶಿವು ರಾಠೋಡ, ನಾರಾಯಣ ರಾಠೋಡ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts