More

    ಕುಟುಂಬದ ಯಜಮಾನಿ ಖಾತೆಗೆ ಹಣ

    ಕಾಗವಾಡ ತಾಲೂಕು ದಂಡಾಕಾರಿ ರಾಜೇಶ ಬುರ್ಲಿ ಹೇಳಿಕೆ
    ಕಾಗವಾಡ: ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. ಪಡಿತರ ಚೀಟಿಯಲ್ಲಿ ನಮೂದಾಗಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ ಎಂದು ಕಾಗವಾಡ ತಹಸೀಲ್ದಾರ್ ರಾಜೇಶ ಬುರ್ಲಿ ತಿಳಿಸಿದ್ದಾರೆ.


    ಸಮೀಪದ ಮಂಗಸೂಳಿ ಗ್ರಾಮದ ಗ್ರಾಮ ಒನ್ ಹಾಗೂ ಬಾಪೂಜಿ ಕೇಂದ್ರದಲ್ಲಿ ಶುಕ್ರವಾರ ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪಡಿತರ ಚೀಟಿಯಲ್ಲಿ ಗುರುತಿಸಲಾಗಿರುವ ಯಜಮಾನಿ ಮಹಿಳೆಗೆ ನೋಂದಣಿ ಮಾಡಿಸುವ ಸ್ಥಳದ ವಿವರವನ್ನು ಎಸ್.ಎಂ.ಎಸ್ ಮೂಲಕ ತಿಳಿಸಲಾಗುವುದು.
    ಸಮೀಪದ ಗ್ರಾಮ ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿ ಮಾಡಿಸಬೇಕು. ನಗರ ಪ್ರದೇಶದಲ್ಲಿ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಕರ್ನಾಟಕ ಒನ್ ಕೇಂದ್ರ, ಹಾಗೂ ನಿಗದಿಪಡಿಸಿರುವ ಸ್ಥಳಗಳಲ್ಲಿ ನೋಂದಣಿ ಮಾಡಿಸಬೇಕು. ಇಲ್ಲವೇ ಸರ್ಕಾರದ ಪ್ರತಿನಿಗಳು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಂದಲೂ ನೋಂದಣಿ ಮಾಡಿಸಬಹುದು.

    ಫಲಾನುಭವಿ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ ಸಮಯ ಹಾಗೂ ಸ್ಥಳವನ್ನು ಕರೆ ಮಾಡಿ ತಿಳಿಸಲಾಗುವುದು. ನಿಗದಿಪಡಿಸಿದ ದಿನಾಂಕದಂದು ನೋಂದಣಿ ಮಾಡಿಸಲು ಸಾಧ್ಯವಾಗದಿದ್ದಲ್ಲಿ ಅದೇ ಸೇವಾ ಕೇಂದ್ರಕ್ಕೆ ತೆರಳಿ ಸಂಜೆ 5 ರಿಂದ 7 ಗಂಟೆಯೊಳಗೆ ನೋಂದಾಯಿಸಿಕೊಳ್ಳಬೇಕು. ನೋಂದಣಿಗೆ ಬರುವಾಗ ಪಡಿತರ, ಆಧಾರ್ ಕಾರ್ಡ್, ಪತಿಯ ಆಧಾರ್ ಕಾರ್ಡ್, ಬ್ಯಾಂಪಾಸ್‌ಬುಕ್ ಕಡ್ಡಾಯವಾಗಿ ತರಬೇಕು. ನೋಂದಣಿ ಬಳಿಕ ಮಂಜೂರಾತಿ ಪತ್ರ ನೀಡಲಾಗುವುದು.


    ಈಗಾಗಲೇ ಆಧಾರ್ ಜೋಡನೆಯಾಗಿರುವ ಫಲಾನುಭವಿ ಬ್ಯಾಂಕ್ ಖಾತೆಗೆ 2 ಸಾವಿರ ರೂ.ಗಳನ್ನು ಡಿಬಿಟಿ ಮೂಲಕ ಜಮೆ ಮಾಡಲಾಗುವುದೆಂದು ತಿಳಿಸಿದರು. ಗ್ರಾಮ ಲೆಕ್ಕಾಕಾರಿ ಪರಾಗ ಕಾಂಬಳೆ, ಕೆ.ಕೆ.ಕುಲಕರ್ಣಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts