More

    ಕುಡಿಯುವ ನೀರಿನ್ನು ಪ್ರತಿ ವಾರಕ್ಕೊಮ್ಮೆ ಪರೀಕ್ಷೆ ಮಾಡಿ:ಡಿಸಿ

    ಹಾಸನ: ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಸರಬರಾಜಾಗುವ ಕುಡಿಯುವ ನೀರಿನಲ್ಲಿ ಪ್ರತಿ ವಾರಕ್ಕೊಮ್ಮೆ ಪರೀಕ್ಷೆ ಮಾಡಿ ತನಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸಿ ಸತ್ಯಭಾಮಾ ತಿಳಿಸಿದರು.
    ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಸಭೆಯ ಬಳಿಕ ಅವರು ಜಿಲ್ಲೆಯ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು,ಮೈಸೂರಿನಲ್ಲಿ ಕಲುಷಿತ ನೀರನ್ನು ಕುಡಿದು ಸಾವನ್ನಪ್ಪಿದ ಘಟನೆಯ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಎಲ್ಲಾ ಕುಡಿಯುವ ನೀರಿನ ಘಟಕಗಳಲ್ಲಿ ನೀರಿನ ಸ್ಯಾಂಪಲ್ ಪಡೆದು ಪ್ರತಿ ವಾರ ಪರೀಕ್ಷೆ ನಡೆಸಬೇಕು. ಈ ಬಗ್ಗೆ ತನಗೆ ವರದಿ ಕೂಡ ಸಲ್ಲಿಸುವಂತೆ ಅವರು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಹಾಗೂ ನಗರಾಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಿದರು.
    ಜಿಲ್ಲೆಯ ಎಲ್ಲ ರಾಜಾಕಾಲುವೆಗಳಲ್ಲಿ ನೀರು ಅರಿವಿಗೆ ತಡೆಯನ್ನು ನಿರ್ವಹಣೆಗೊಳಿಸಬೇಕೆಂದು ಅವರು ಸೂಚಿಸಿದರು.
    ಜಿಲ್ಲೆಯ ಬರ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು ಪ್ರಸ್ತುತ ಹಾಸನ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ ಬಂದಿದೆ. ವಿಪತ್ತು ನಿರ್ವಹಣಾ ನಿಧಿಯಲ್ಲಿ ಸಾಕಷ್ಟು ಅನುದಾನ ಇದೆ ಎಂದರು.
    ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಮಂಜೂರಾದ ಇನ್ನು 15 ಕುಟುಂಬಗಳಿಗೆ ಪರಿಹಾರ ಬಿಡುಗಡೆಯಾಗಬೇಕಿದೆ ಎಂದು ತಿಳಿಸಿದರು.
    ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ ಆರ್ ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕೆ ಟಿ ಶಾಂತಲಾ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts