More

    ಕುಡಿಯುವ ನೀರಿನ ಅಭಾವ ಆಗದಿರಲಿ

    ನರೇಗಲ್ಲ: ಪಟ್ಟಣ ಸೇರಿ ಮಜರೆ ಗ್ರಾಮಗಳಿಗೆ ಕುಡಿಯುವ ನೀರಿನ ಅಭಾವ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರು ಹಾಗೂ ಕರೊನಾ ಬಗ್ಗೆ ನಿರ್ಲಕ್ಷ ವಹಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

    ಸ್ಥಳೀಯ ಪಟ್ಟಣ ಪಂಚಾಯಿತಿಗೆ ಕಾರ್ಯಾಲಯಕ್ಕೆ ಸೋಮವಾರ ಭೇಟಿ ನೀಡಿ ಅವರು ಮಾತನಾಡಿದರು.

    ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಪಟ್ಟಣದ ಜನತೆಗೆ ಸಮರ್ಪಕವಾಗಿ ಕುಡಿಯುವ ನೀರು ದೊರೆಯುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಈ ಬಗ್ಗೆ ಸಾಕಷ್ಟು ಸಾರ್ವಜನಿಕರು ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿದ್ದಾರೆ. ಕುಡಿಯುವ ನೀರಿನ ಯೋಜನೆಗೆ ಜಿಲ್ಲಾಡಳಿತ ಕೋಟ್ಯಂತರ ರೂ. ಅನುದಾನ ಬಿಡುಗಡೆ ಮಾಡಲು ಸಿದ್ಧವಿದೆ. ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಪಟ್ಟಣದಲ್ಲಿರುವ ಖಾಸಗಿ ಕೊಳವೆ ಬಾವಿಗಳ ಮಾಲೀಕರೊಂದಿಗೆ ಮಾತನಾಡಿ, ಬೇಸಿಗೆ ಮುಗಿಯುವವರೆಗೂ ಬಾಡಿಗೆಗೆ ಪಡೆದುಕೊಂಡು ನೀರಿನ ಅಭಾವ ನೀಗಿಸಬೇಕು. ಪಟ್ಟಣದಲ್ಲಿ ಕುಡಿಯುವ ನೀರಿನ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಒಂದು ವಾರದೊಳಗೆ ನೀರು ಸರಬರಾಜು ಮಾಡುವಂತೆ ಡಿಬಿಓಟಿ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

    ಪೌರ ಕಾರ್ವಿುಕರಿಗೆ ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡುವ ಮೂಲಕ ಎಚ್ಚರಿಕೆ ವಹಿಸಬೇಕು. ಲಾಕ್ ಡೌನ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವಾಗಬೇಕು ಎಂದರು.

    ರೋಣ ತಹಶೀಲ್ದಾರ್ ಜಿ.ಬಿ. ಜಕ್ಕನಗೌಡ್ರ, ತಾ.ಪಂ ಇಒ ಸಂತೋಷಕುಮಾರ ಪಾಟೀಲ, ಪ.ಪಂ. ಮುಖ್ಯಾಧಿಕಾರಿ ಎಂ.ಎ. ನೂರುಲ್ಲಾಖಾನ್, ಪಿಎಸ್​ಐ ಬಿ.ಬಿ. ಕೊಳ್ಳಿ, ಎಸ್.ಎ. ಜಕ್ಕಲಿ, ಶಂಕ್ರಪ್ಪ ದೊಡ್ಡಣ್ಣವರ, ಆರೀಫ್ ಮಿರ್ಜಾ ಸೇರಿದಂತೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts