More

    ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ

    ಮುಂಡಗೋಡ: ತಾಲೂಕಿನ ಕಾತೂರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಂದೊದಗಿದ ಕಾರಣ ಗ್ರಾಮ ಪಂಚಾಯಿತಿ ಕಾರ್ಯಾಲಯದ ಎದುರು ಗ್ರಾಮಸ್ಥರು ಖಾಲಿ ಕೊಡಗಳನ್ನು ಹಿಡಿದು ಶುಕ್ರವಾರ ಪ್ರತಿಭಟನೆ ನಡೆಸಿದರು.

    ಕಳೆದ 15 ದಿನಗಳಿಂದ ಗ್ರಾಮದಲ್ಲಿ ಕುಡಿಯುವ ನೀರು ಸರಿಯಾಗಿ ಸರಬರಾಜು ಆಗುತ್ತಿಲ್ಲ. ನೀರಿಗಾಗಿ ಪರದಾಡುವ ಪರಿಸ್ಥಿತಿ ಬಂದಿದೆ. ಇರುವ ಎರಡು ಕೊಳವೆ ಬಾವಿಗಳಲ್ಲಿ ಒಂದು ಕೊಳವೆ ಬಾವಿ ದುರಸ್ತಿಯಾಗಿದ್ದು, ಇನ್ನೊಂದು ಕೊಳವೆ ಬಾವಿಯಿಂದ ಸರಬರಾಜು ಆಗುತ್ತಿರುವ ನೀರು ಗ್ರಾಮಸ್ಥರಿಗೆ ಸಾಕಾಗುತ್ತಿಲ್ಲ. ಗ್ರಾಮದ ಡಿಪೋ ಹತ್ತಿರ ಇರುವ ಕೊಳವೆ ಬಾವಿಯ ನೀರು ಹೆಚ್ಚುವರಿಯಾಗಿದ್ದು, ಇದೇ ಕೊಳವೆ ಬಾವಿಗೆ ಮಾಡಿರುವ ಪೈಪ್​ಲೈನ್​ಗೆ ವಾಲ್ ಅಳವಡಿಸಿ ತಾತ್ಕಾಲಿಕವಾಗಿ ನೀರು ಸರಬರಾಜು ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದರು.

    ಸ್ಥಳಕ್ಕೆ ಭೇಟಿ ನೀಡಿದ ಪಿಎಸ್​ಐ ಬಸವರಾಜ ಮಬನೂರ ಮತ್ತು ಪಿಡಿಒ ಸಂತೋಷ ಹಜಾರೆ ತಾತ್ಕಾಲಿಕವಾಗಿ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts