More

    ಕುಡಿಯುವ ನೀರು ಪೂರೈಕೆಯಲ್ಲಿ ನಿರ್ಲಕ್ಷ ಬೇಡ

    ವಿಜಯಪುರ: ಎಲ್ಲ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಸೂಚಿಸಿದರು.

    ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಉತ್ತಮ ಮಳೆಯಾಗುತ್ತಿರುವ ಕಾರಣ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಸದ್ಯಕ್ಕಿಲ್ಲ. ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಸಬೇಕು. ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸಬೇಕು ಎಂದರು.

    ನೀರಿನ ಕೊರತೆಯಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. 20 ಗ್ರಾಪಂಗಳ ವ್ಯಾಪ್ತಿಯ 29 ಗ್ರಾಮಗಳಿಗೆ 38 ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಸದ್ಯ ಪ್ರವಾಹ ಭೀತಿಯಿಲ್ಲ. 3 ಲಕ್ಷ ಕ್ಯೂಸೆಕ್ ಹೆಚ್ಚಿನ ಪ್ರಮಾಣದ ನೀರು ಹರಿದರೆ ಮಾತ್ರ ಪ್ರವಾಹ ಪರಿಸ್ಥಿತಿ ಎದುರಾಗಲಿದೆ. ಪ್ರವಾಹಕ್ಕೊಳಗಾಗುವ ಪ್ರದೇಶಗಳಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಸಂಕನಾಳ-ಟಕ್ಕಳಕಿ ಕೆರೆ ತುಂಬಿಸುವ ಕಾರ್ಯ ಪೂರ್ಣಗೊಳಿಸಬೇಕು. 1.4 ಕಿಮೀ. ಪೈಪ್‌ಲೈನ್ ಕಾಮಗಾರಿ ಬಾಕಿ ಉಳಿದಿದ್ದು 3 ತಿಂಗಳ ಅವಧಿಯಲ್ಲಿ ಹಾಗೂ ಯಂಕಂಚಿ- ಪುರದಾಳ ಕೆರೆ ತುಂಬಿಸುವ ಕಾಮಗಾರಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು. ಜಿಲ್ಲೆಯಲ್ಲಿನ ಓವರ್‌ಹೆಡ್ ಟ್ಯಾಂಕ್‌ಗಳ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ಹವಾಮಾನ ಇಲಾಖೆಯ ಮಾಹಿತಿಯಂತೆ ಮುಂದಿನ ದಿನಗಳಲ್ಲಿ ಮಳೆ ಜಾಸ್ತಿಯಾಗುವ ಸಂಭವವಿರುವುದರಿಂದ ಈಗಾಗಲೇ ಪ್ರವಾಹಕ್ಕೊಳಗಾಗುವ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿ, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಈ ಕುರಿತು ಜಿಲ್ಲಾ ಹಾಗೂ ತಾಲೂಕಾ ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆಗಳನ್ನು ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ. ಜಿಲ್ಲೆಯಲ್ಲಿ ರಸಗೊಬ್ಬರದ ಯಾವುದೇ ಕೊರತೆಯಿಲ್ಲ. 70 ಸಾವಿರ ಮೆಟ್ರಿಕ್ ಟನ್ ದಾಸ್ತಾನಿದೆ. ಇನ್ನೂ 2 ಸಾವಿರ ಮೆಟ್ರಿಕ್‌ಟನ್ ಪೂರೈಕೆಯಾಗಲಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts