More

    ಕುಮಾರಸ್ವಾಮಿ ಯಾಕೆ ಹೀಗೆ ಹೇಳಿದರೋ?, ಮಾಜಿ ಸಿಎಂ ಜಗದೀಶ ಶೆಟ್ಟರ್ ಆಕ್ಷೇಪ

    ಹುಬ್ಬಳ್ಳಿ: ರಾಜ್ಯ ವಿಧಾನಸಭೆ ಚುನಾವಣೆಗಳು ಹತ್ತಿರ ಇರುವ ಈ ಸಂದರ್ಭದಲ್ಲಿ ಜಾತಿ ಹಾಗೂ ವ್ಯಕ್ತಿಗಳ ಬಗ್ಗೆ ಪರಸ್ಪರ ಟೀಕೆ ಮಾಡವುದು ಸರಿಯಲ್ಲ, ಇದರ ಅವಶ್ಯಕತೆಯೂ ಈಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅಭಿಪ್ರಾಯಪಟ್ಟರು.

    ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಬ್ರಾಹ್ಮಣರ ಕುರಿತು ನೀಡಿರುವ ಹೇಳಿಕೆ ಹಿನ್ನೆಲೆಯಲ್ಲಿ ನಗರದಲ್ಲಿ ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯದಲ್ಲಿ ಬಹಳಷ್ಟು ಅನುಭವ ಇರುವ ರಾಜಕಾರಣಿಯಾಗಿರುವ ಕುಮಾರಸ್ವಾಮಿ ಯಾಕೆ ಹೀಗೆ ಮಾತನಾಡಿದ್ದಾರೆಯೋ ಗೊತ್ತಿಲ್ಲ. ಇದರ ಮೂಲಕ ಜನರ ದಾರಿ ತಪ್ಪಿಸುವ ಕಾರ್ಯವನ್ನು ಅವರು ಮಾಡುತ್ತಿದ್ದಾರೆ ಎಂದರು.

    ಇಂತಹ ಟೀಕೆ ಟಿಪ್ಪಣೆಗಳಿಗೆ ರಾಜ್ಯದಲ್ಲಿ ನಿಯಂತ್ರಣ ಹೇರಬೇಕಾಗಿದೆ. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಸಿಎಂ ಯಾರಾಗಬೇಕೆಂಬುದರ ಕುರಿತು ದೊಡ್ಡ ಮಟ್ಟದ ಚರ್ಚೆಯು ಪಕ್ಷದ ವೇದಿಕೆಯಲ್ಲಿ ನಡೆಯುತ್ತದೆ. ಹಾಗಾಗಿ ಯಾವುದೇ ವೈಯಕ್ತಿಕ ವಿಚಾರ ಹಾಗೂ ವ್ಯಕ್ತಿ ಬಗ್ಗೆ ಈ ರೀತಿ ಮಾತನಾಡುವುದು ಅಪ್ರಸ್ತುತ ಎಂದು ಹೇಳಿದರು.

    ಹುಬ್ಬಳ್ಳಿಯಲ್ಲಿ ಫ್ಲೈಓವರ್ ಕಾಮಗಾರಿಗಾಗಿ ಸಹಕಾರಿ ಧುರೀಣ ದಿ. ಕೆ.ಎಚ್. ಪಾಟೀಲ ಅವರ ಪುತ್ಥಳಿ ಸ್ಥಳಾಂತರ ಮಾಡಲಾಗಿದೆ. ಆದರೆ, ಈ ವಿಚಾರದಲ್ಲಿ ಅಧಿಕಾರಿಗಳು ಅವರ ಪ್ರತಿಷ್ಠಾನದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಫ್ಲೈಓವರ್ ಕಾಮಗಾರಿ ಹಿನ್ನೆಲೆಯಲ್ಲಿ ಬಸವೇಶ್ವರ ಹಾಗೂ ಕೆ.ಎಚ್. ಪಾಟೀಲ ಅವರ ಪುತ್ಥಳಿ ಸ್ಥಳಾಂತರಿಸಲಾಗಿದೆ. ಕಾಮಗಾರಿ ಮುಗಿದ ಬಳಿಕ ಈಗಿನ ಸ್ಥಳದಲ್ಲೇ ಮರಳಿ ಪ್ರತಿಷ್ಠಾಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts