More

    ಕುವೆಂಪು ವಿವಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ: ಪರೀಕ್ಷಾ ಶುಲ್ಕ ಹೆಚ್ಚಳ, ನೂತನ ಶೈಕ್ಷಣಿಕ ವೇಳಾಪಟ್ಟಿ ವಿರೋಧಿಸಿ ಬೃಹತ್ ಪ್ರತಿಭಟನೆ

    ಸಾಗರ: ಕುವೆಂಪು ವಿವಿಯ ನೂತನ ಶೈಕ್ಷಣಿಕ ವೇಳಾಪಟ್ಟಿ ಖಂಡಿಸಿ ಹಾಗೂ ಹೆಚ್ಚಿಸಿರುವ ಪರೀಕ್ಷಾ ಶುಲ್ಕವನ್ನು ಇಳಿಸುವಂತೆ ಒತ್ತಾಯಿಸಿ ಸೋಮವಾರ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.
    ಎಬಿವಿಪಿ ರಾಜ್ಯ ಕಾರ‌್ಯಕಾರಿಣಿ ಸದಸ್ಯ ಅಭಿಷೇಕ್ ಎಂ.ಶೆಟ್ಟಿ ಮಾತನಾಡಿ, ಕುವೆಂಪು ವಿವಿ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿನ ಜತೆ ಚೆಲ್ಲಾಟವಾಡುತ್ತಿದೆ. ಆ.18ಕ್ಕೆ ನೂತನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದ್ದು, ಅತ್ಯಂತ ಅವೈಜ್ಞಾನಿಕವಾಗಿದೆ. 4 ಮತ್ತು 6ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆ.30 ಪ್ರಸಕ್ತ ವರ್ಷದ ಕೊನೆದಿನ ಎಂದು ಪ್ರಕಟಿಸಿ, ಸೆ.9ರಂದು ಪರೀಕ್ಷೆ ಘೋಷಣೆ ಮಾಡಿದೆ. ಆದರೆ ಸೆಮಿಸ್ಟರ್‌ಗೆ ಸಂಬಂಧಪಟ್ಟ ಪಾಠಗಳು ಪೂರ್ಣಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳು ಒತ್ತಡದಲ್ಲಿ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯ ಶೈಕ್ಷಣಿಕ ವೇಳಾಪಟ್ಟಿಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
    ಎಬಿವಿಪಿ ಹೋರಾಟಕ್ಕೆ ಮಣಿದು ಮೊದಲನೇ ವರ್ಷದ ಪದವಿ ವಿದ್ಯಾರ್ಥಿಗಳ ಶುಲ್ಕವನ್ನು 300 ರೂ. ಕಡಿಮೆ ಮಾಡಲಾಗಿದೆ. ಈಗ ಕಡಿಮೆ ಮಾಡಿರುವ ಶುಲ್ಕದಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಉಪಯೋಗವಾಗುವುದಿಲ್ಲ. ಇನ್ನಷ್ಟು ಶುಲ್ಕ ಕಡಿಮೆ ಮಾಡಿ ವಿದ್ಯಾರ್ಥಿಗಳ ಮೇಲಿನ ಆರ್ಥಿಕ ಹೊರೆಯನ್ನು ಇಳಿಸಬೇಕು ಎಂದು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts