More

    ಕೂಡಲೇ ಬರ ಪರಿಹಾರ ಕಾಮಗಾರಿ ಆರಂಭಿಸಿ


    ಯಾದಗಿರಿ: ರಾಜ್ಯ ಸರಕಾರ ಯಾದಗಿರಿ ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿದ್ದು, ಕೂಡಲೇ ಬರ ಪರಿಹಾರ ಕಾಮಗಾರಿ ಆರಂಭಿಸಲು ಒತ್ತಾಯಿಸಿ ಅಖಿಲ ಭಾರತ ಕೃಷಿ ಕಾರ್ಮಿಕ ಸಂಘಟನೆಯಿದ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

    ಜಿಲ್ಲಾಧ್ಯಕ್ಷ ಶರಣಗೌಡ ಗೂಗಲ್ ಮಾತನಾಡಿ, ಈ ವರ್ಷ ಮುಂಗಾರು ಮಳೆ ಅಭಾವದಿಂದಾಗಿ ರಾಜ್ಯದಲ್ಲಿ ಸಂಪೂರ್ಣ ಬೆಳೆ ನಾಶವಾಗಿದೆ. ತೊಗರಿ, ಶೇಂಗಾ, ಕಬ್ಬು ಹಾಗೂ ಇನ್ನಿತರ ಬೆಳೆ ನೀರಿಲ್ಲದೆ ಒಣಗುವ ಹಂತ ತಲುಪಿವೆ, ರಾಜ್ಯದ ೩೧ ಜಿಲ್ಲೆಗಳ ೨೩೬ ತಾಲೂಕುಗಳ ಪೈಕಿ ೧೬೧ ತೀವ್ರ, ೩೪ ಸಾಮಾನ್ಯ ಬರ ಪೀಡಿತ ತಾಲೂಕುಗಳು ಎಂದು ಸಚಿವ ಸಂಪುಟದ ಒಪ್ಪಿಗೆಯ ನಂತರ ಕಂದಾಯ ಇಲಾಖೆ ಪ್ರಕಟಿಸಿದೆ. ಈ ಸಂದರ್ಭದಲ್ಲಿ ಬರಪರಿಹಾರ ಕಾರ್ಯಗಳನ್ನು ತುರ್ತಾಗಿ ಆರಂಭಿಸಬೇಕಿದೆ ಎಂದು ಒತ್ತಾಯಿಸಿದರು.

    ಸರಕಾರ ಇದುವರೆಗೂ ಬರ ಕಾಮಗಾರಿ ಆರಂಭಿಸುವ ಯಾವುದೇ ಸೂಚನೆ ನೀಡಿಲ್ಲ. ಕೇಂದ್ರ ಹಾಗೂ ರಾಜ್ಯಸರಕಾರಗಳು ಪರಸ್ಪರ ಕೆಸರೆರೆಚಾಟದಲ್ಲಿ ತೊಡಗಿಕೊಂಡಿವೆ. ಇದರಿಂದ ರೈತರ ಪರಿಸ್ಥಿತಿ ಇನ್ನೂಷ್ಟು ಗಂಭೀರವಾಗಿದೆ. ಕೇಂದ್ರ ತಂಡವು ಕರ್ನಾಟಕದ ವಿವಿಧ ಕಡೆ ಸಮೀಕ್ಷೆ ಮಾಡಿ ಹಲವು ವಾರಗಳು ಕಳೆದರೂ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಹಣ ಬಿಡುಗಡೆ ಮಾಡದೆ ಇರುವುದು ಅತ್ಯಂತ ನೋವಿನ ಸಂಗತಿ ಎಂದು ಕಿಡಿಕಾರಿದರು.

    ಸರಕಾರ ಕೂಡಲೇ ಬರಪರಿಹಾರ ಕಾಮಗಾರಿ ಯುದ್ಧೋಪಾದಿಯಲ್ಲಿ ಆರಂಭಿಸಬೇಕು. ಬ್ಯಾಂಕ್ ಸಾಲ ಸೇರಿ ರೈತರ ಸಾಲ ಮನ್ನಾ ಮಾಡಬೇಕು. ದ್ಯೋಗ ಖಾತ್ರಿ ಯೋಜನೆಯನ್ನು ವರ್ಷಪೂರ್ತಿ ವಿಸ್ತರಿಸಬೇಕು. ಗುಳೆ ಹೋಗುವುದನ್ನು ತಪ್ಪಿಸಿ, ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ನೀರು ಮತ್ತು ಜಾನುವರುಗಳಿಗೆ ನೀರು, ಮೇವಿನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts