More

    ಕೂಲಿ ಕಾರ್ವಿುಕರಿಗೆ ಉದ್ಯೋಗ ನೀಡಿ

    ರೋಣ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್. ಪಾಟೀಲ ಅವರು ಪಕ್ಷದ ಮಾಜಿ ಶಾಸಕರು, ಹಾಲಿ ಜಿಪಂ, ತಾಪಂ ಸೇರಿ ವಿವಿಧ ಚುನಾಯಿತ ಪ್ರತಿನಿಧಿಗಳು ಹಾಗೂ ವಿವಿಧ ಬ್ಲಾಕ್ ಕಮಿಟಿ ಅಧ್ಯಕ್ಷರೊಂದಿಗೆ ಭಾನುವಾರ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿದರು.

    ಕರೊನಾ ತಡೆಗೆ ಜಿಲ್ಲೆಯಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ರ್ಚಚಿಸಿದರು. ಸಮಸ್ಯೆಗೆ ಸಿಲುಕಿರುವ ರೈತರು, ಕೃಷಿ ಕೂಲಿಕಾರರಿಗೆ ಸಹಾಯ-ಸಹಕಾರ ನೀಡಬೇಕು. ಬ್ಲಾಕ್ ಮಟ್ಟದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

    ಜಿಪಂ ಅಧ್ಯಕ್ಷ-ಉಪಾಧ್ಯಕ್ಷರು ಸೇರಿ ಪ್ರತಿನಿಧಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ತುರ್ತಾಗಿ ಕೆಲಸ ಪ್ರಾರಂಭಿಸುವ ಮೂಲಕ ಗ್ರಾಮೀಣ ಭಾಗದ ಕೃಷಿ ಕೂಲಿಕಾರರಿಗೆ ಉದ್ಯೋಗ ದೊರಕಿಸಿಕೊಡಬೇಕು ಎಂದರು.

    ಮಾಜಿ ಶಾಸಕರಾದ ಬಿ.ಆರ್.ಯಾವಗಲ್, ಜಿ.ಎಸ್. ಗಡ್ಡದೇವರಮಠ, ಶ್ರೀಶೈಲಪ್ಪ ಬಿದರೂರ, ರಾಮಕೃಷ್ಣ ದೊಡ್ಡಮನಿ, ಜಿ.ಪಂ. ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ, ಉಪಾಧ್ಯಕ್ಷೆ ಮಲ್ಲಮ್ಮ ಬಿಚ್ಚೂರ ಇತರರಿದ್ದರು.



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts