More

    ಕೃತಕ ಅಭಾವ ಸೃಷ್ಟಿಸಿದರೆ ಲೈಸನ್ಸ್ ರದ್ದು

    ಧಾರವಾಡ: ಎಲ್ಲ ಜಿಲ್ಲೆಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಮಾಡಲಾಗಿದೆ. ಮಾರಾಟಗಾರರು ಬಿತ್ತನೆ ಬೀಜ, ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ, ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಅಂಥ ಅಂಗಡಿಗಳ ಲೈಸನ್ಸ್ ರದ್ದುಪಡಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಸೋಮವಾರ ಏರ್ಪಡಿಸಿದ್ದ ಮುಂಗಾರು ಹಂಗಾಮಿನ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಕೃಷಿ ಇಲಾಖೆಯ ಜಾಗೃತಿ ಕೋಶದಿಂದ 2020- 21ನೇ ಸಾಲಿನಲ್ಲಿ 16.20 ಕೋಟಿ ರೂಪಾಯಿ ಮೊತ್ತದ ಹಾಗೂ 2021- 22ರಲ್ಲಿ 1.06 ಕೋಟಿ ರೂಪಾಯಿ ಮೊತ್ತದ ನಕಲಿ ಬೀಜ, ರಸಗೊಬ್ಬರ, ಕೀಟನಾಶಕಗಳನ್ನು ವಶಪಡಿಸಿಕೊಂಡು ಕ್ರಮವಾಗಿ 55 ಹಾಗೂ 13 ಪ್ರಕರಣಗಳನ್ನು ದಾಖಲಿಸಲಾಗಿದೆ. ನಕಲಿ ಜೈವಿಕ ಕೀಟನಾಶಕಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ವಿರುದ್ಧ 2019- 20ರಲ್ಲಿ 69 ಹಾಗೂ 2020- 21ರಲ್ಲಿ 7 ಪ್ರಕರಣ ದಾಖಲಿಸಲಾಗಿದೆ. ಕಳೆದ ಸಾಲಿನಲ್ಲಿ ರಾಜ್ಯಾದ್ಯಂತ 266 ಮಾರಾಟಗಾರರ ಪರವಾನಗಿಗಳನ್ನು ರದ್ದುಪಡಿಸಲಾಗಿದೆ. ಪ್ರಸಕ್ತ ವರ್ಷ 15 ಅಂಗಡಿಗಳ ಲೈಸನ್ಸ್ ರದ್ದುಪಡಿಸಲಾಗಿದೆ ಎಂದರು.

    ಜಿಲ್ಲೆಯಲ್ಲಿ ಈ ವರ್ಷ ವಾಡಿಕೆಗಿಂತ ಶೇ. 99ರಷ್ಟು ಹೆಚ್ಚುವರಿ ಮಳೆಯಾಗಿದೆ. ಜಿಲ್ಲೆಯಲ್ಲಿ 15,428 ಕ್ವಿಂಟಾಲ್ ವಿವಿಧ ಬಿತ್ತನೆ ಬೀಜಗಳ ಬೇಡಿಕೆ ಇದ್ದು, 16,781 ಕ್ವಿಂಟಾಲ್ ಬೀಜ ವಿತರಿಸಲಾಗಿದೆ. 20,268 ಕ್ವಿಂಟಾಲ್ ಬೀಜ ಲಭ್ಯತೆ ಇದೆ. ಜಿಲ್ಲೆಯಲ್ಲಿ 2.35 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬಿತ್ತನೆ ಗುರಿ ಇದ್ದು, ಈಗಾಗಲೇ 0.32909 ಹೆಕ್ಟೇರ್ ಪ್ರದೇಶ ಬಿತ್ತನೆಯಾಗಿದೆ. ರಾಜ್ಯದಲ್ಲಿ ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಇದೆ. ಜಿಲ್ಲೆಯಲ್ಲಿ 22,423 ಟನ್ ವಿವಿಧ ರಸಗೊಬ್ಬರ ಮಾರಾಟವಾಗಿದೆ. 2,713 ಟನ್ ಉಳಿಕೆ ದಾಸ್ತಾನು ಲಭ್ಯವಿದೆ ಎಂದರು.

    ಶಾಸಕರಾದ ಸಿ.ಎಂ. ನಿಂಬಣ್ಣವರ, ಅಬ್ಬಯ್ಯ ಪ್ರಸಾದ, ಅಮೃತ ದೇಸಾಯಿ, ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿ.ಪಂ. ಸಿಇಒ ಡಾ. ಸುಶೀಲಾ.ಬಿ., ಕೃಷಿ ವಿವಿ ಕುಲಪತಿ ಡಾ. ಎಂ.ಬಿ. ಚಟ್ಟಿ, ಕೃಷಿ ನಿರ್ದೇಶನಾಲಯದ ಸಾವಯವ ವಿಭಾಗದ ಅಪರ ನಿರ್ದೇಶಕ ಜೆ. ವೆಂಕಟರಾಮರೆಡ್ಡಿ ಪಾಟೀಲ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿದ್ದರು.

    ಜಂಟಿ ಕೃಷಿ ನಿರ್ದೇಶಕ ರಾಜಶೇಖರ ವಿಜಯಪುರ ಜಿಲ್ಲೆಯ ಮುಂಗಾರು ಹಂಗಾಮಿನ ಪೂರ್ವಸಿದ್ಧತೆಯನ್ನು ವಿವರಿಸಿದರು.

    ಬದು, ಹೊಂಡ ನಿರ್ಮಾಣ

    ಪ್ರಧಾನಮಂತ್ರಿಗಳ ಘೊಷಣೆ ‘ಕ್ಯಾಚ್ ದ ರೇನ್ ವೇರ್ ಇಟ್ ಫಾಲ್ಸ್’ ಅಡಿ ಕಳೆದ ವರ್ಷ ರಾಜ್ಯದಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ 1.17 ಕೋಟಿ ಮಾನವ ದಿನಗಳನ್ನು ಸೃಜಿಸಿ, 335 ಕೋಟಿ ರೂಪಾಯಿ ವೆಚ್ಚ ಭರಿಸಿ 60,500 ಹೆಕ್ಟೇರ್ ಬದು ನಿರ್ಮಾಣ ಹಾಗೂ 15,504 ಕೃಷಿ ಹೊಂಡ ನಿರ್ವಿುಸಲಾಗಿದೆ. ಜಿಲ್ಲೆಯಲ್ಲಿ 281 ಹೆಕ್ಟೇರ್ ಭೂಮಿಯಲ್ಲಿ ಬದು ನಿರ್ಮಾಣ ಹಾಗೂ 48 ಹೆಕ್ಟೇರ್​ದಲ್ಲಿ ಕೃಷಿ ಹೊಂಡಗಳನ್ನು ನಿರ್ವಿುಸಲಾಗಿದೆ ಎಂದು ಸಚಿವ ಬಿ.ಸಿ. ಪಾಟೀಲ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts