More

    ಕೃತಿಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಿ

    ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಸಲಹೆ


    ಹನೂರು: ಕನಕದಾಸರ ಸಾಹಿತ್ಯ ಉತ್ತಮ ಸಮಾಜಕ್ಕೆ ದಾರಿದೀಪವಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಸಲಹೆ ನೀಡಿದರು.

    ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

    ಕನಕದಾಸರು ಮನುಕುಲದ ಕಲ್ಯಾಣಕ್ಕಾಗಿ ತತ್ವ, ಸಿದ್ಧಾಂತ ಹಾಗೂ ಚಿಂತನಾಶೀಲ ವಿಚಾರಗಳನ್ನು ತಮ್ಮ ಕೀರ್ತನೆಗಳ ಮೂಲಕ ತಿಳಿಸಿಕೊಟ್ಟಿದ್ದಾರೆ. ದಾಸ ಸಾಹಿತ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಅತ್ಯುತ್ತಮ ಕವಿ ಎನಿಸಿಕೊಂಡಿದ್ದಾರೆ. ಹರಿಭಕ್ತಿಸಾರ, ಮೋಹನ ತರಂಗಿಣಿ, ನರಸಿಂಹ ತವ, ರಾಮಧಾನ್ಯ ಚರಿತ್ರೆ ಹಾಗೂ ನಳ ಚರಿತ್ರೆ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದು, ಉತ್ತಮ ಸಮಾಜಕ್ಕೆ ಮಾರ್ಗದರ್ಶಿ ಗ್ರಂಥಗಳಾಗಿದೆ. ಇಂತಹ ಕೃತಿಗಳನ್ನು ಪ್ರತಿಯೊಬ್ಬರೂ ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

    ಶಿಕ್ಷಣ ಸಂಯೋಜಕರಾದ ಕಿರಣ್‌ಕುಮಾರ್, ಕಂದವೇಲು, ಅಧೀಕ್ಷಕರಾದ ಬಸವಣ್ಣ, ಮಹೇಶ್‌ಕುಮಾರ್, ಪ್ರಥಮ ದರ್ಜೇ ಸಹಾಯಕರಾದ ಗಿರೀಶ್, ಪೂರ್ಣಿಮಾ, ಕಚೇರಿ ಸಿಬ್ಬಂದಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts