More

    ಕೃಷಿಕರ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ವಿಫಲ

    ನವಲಗುಂದ: ಮಹದಾಯಿ ನೀರಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಇದುವರೆಗೆ ರೈತರ ಕೂಗು ಸರ್ಕಾರಕ್ಕೆ ಕೇಳಿಸದಿರುವುದು ದೌರ್ಭಾಗ್ಯದ ಸಂಗತಿ ಎಂದು ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.

    ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಶುಕ್ರವಾರ ಬಸಪ್ಪ ಲಕ್ಕುಂಡಿ ಅವರ ವೀರಗಲ್ಲಿಗೆ ಮಾರ್ಲಾಪಣೆ ಮಾಡಿ ಮಾತನಾಡಿದ ಅವರು, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಹಿತ ಕಾಯುವಲ್ಲಿ ವಿಫಲವಾಗಿದೆ. ಕೂಡಲೇ ಕೇಂದ್ರ ಸರ್ಕಾರ ಮನಸು ಮಾಡಿದರೆ ಕಳಸಾ-ಬಂಡೂರಿ ವಿಷಯವನ್ನು ಇತ್ಯರ್ಥ ಪಡಿಸಬಹುದು. ಆದರೆ, ಇಚ್ಚಾಶಕ್ತಿ ಕೊರತೆಯಿಂದ ರೈತರು ಸಂಕಷ್ಟ ಅನುಭವಿಸುವಂತಾಗಿದೆ. ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿದ್ದ ಅಂದಿನ ವಿರೋಧ ಪಕ್ಷವೇ ಈಗ ಅಧಿಕಾರದಲ್ಲಿದೆ. ಪ್ರಸ್ತುತ ರೈತರಿಗೆ ಮಾರಕವಾದ 3 ಕೃಷಿ ಕಾಯ್ದೆಗಳನ್ನು ಕೂಡಲೇ ವಾಪಸ್ ಪಡೆದು ನುಡಿದಂತೆ ನಡೆದುಕೊಂಡು ಸಿದ್ದರಾಮಯ್ಯನವರು ತಮ್ಮ ಮಾತನ್ನು ಉಳಿಸಿಕೊಳ್ಳಬೇಕು. ಅಲ್ಲದೆ, ಮಹದಾಯಿ, ಮೇಕೆದಾಟು ಯೋಜನೆಗೆ ನ್ಯಾಯಾಧಿಕರಣ ಆದೇಶ ನೀಡಿದ್ದು ಶೀಘ್ರವೇ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಬೇಕು ಇಲ್ಲದಿದ್ದರೆ ರೈತರೇ ಮುಂದೆ ನಿಂತು ಈ ಎಲ್ಲ ಯೋಜನಗಳಿಗೆ ಅಡಿಗಲ್ಲು ಇಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು. ಜುಲೈ 21ನೇ ದಿನವನ್ನು ‘ರೈತ ಹುತಾತ್ಮ ದಿನ’ ಎಂದು ಆಚರಿಸುವ ಬದಲು ಇದೊಂದು ರೈತ ಶೋಷಿತ ದಿನಾಚರಣೆ ಎಂದು ಭಾವಿಸಿ ಹೋರಾಟಕ್ಕಿಳಿಯುವುದು ಅನಿವಾರ್ಯವಾಗಲಿದೆ ಎಂದರು.

    ಭಕ್ತರಹಳ್ಳಿ ಭೈರೆಗೌಡ, ಭೀಮಸಿ ಗದಾಡಿ, ಶಂಕರ, ಮಲ್ಲನಗೌಡ ಪಾಟೀಲ, ಕಲ್ಮೇಶ ಲಿಗಾಡಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts