More

    ವಿದ್ಯಾರ್ಥಿಗಳಲ್ಲಿ ಸಮಾಜಸೇವಾ ಗುಣ ಬೆಳೆಯಲಿ

     ಚಿಕ್ಕಮಗಳೂರು: ಒಕ್ಕಲಿಗರ ಸಂಘದ ಸಹಯೋಗದಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಆಶೀರ್ವಾದದೊಂದಿಗೆ ಅವರ ಜನ್ಮದಿನದಂದು ಕೃಷಿಕ್ ಸವೋದಯ ಫೌಂಡೇಶನ್ ಶಾಖೆಯನ್ನು ಚಿಕ್ಕಮಗಳೂರಿನಲ್ಲಿ ಪ್ರಾರಂಭಿಸಲಾಗಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡ ಹೇಳಿದರು.

    ನಗರದ ಬಿಜಿಎಸ್ ಸಭಾಂಗಣದಲ್ಲಿ ಆದಿಚುಂಚನಗಿರಿ ತಾಂತ್ರಿಕ ಮಹಾ ವಿದ್ಯಾಲಯ ಕೃಷಿಕ್ ಸವೋದಯ ಫೌಂಡೇಶನ್ ಮತ್ತು ಜಿಲ್ಲಾ ಒಕ್ಕಲಿಗರ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಐಎಎಸ್, ಕೆಎಎಸ್ ಪರೀಕ್ಷೆಗಳ ಮಾರ್ಗದರ್ಶನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

    ವಿದ್ಯಾರ್ಥಿಗಳು ಉನ್ನತ ಸಾಧನೆಯ ಗುರಿಯೊಂದಿಗೆ ನಿರಂತರ ಅಧ್ಯಯನದ ಮೂಲಕ ಯಶಸ್ಸು ಸಾಧಿಸಬೇಕು. ಅಲ್ಲದೆ ಸಮಾಜಸೇವಾ ಗುಣ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

    ಕೃಷಿಕ್ ಸರ್ವೇದಯ ಫೌಂಡೇಶನ್​ನ ಡಾ.ವೈ.ಕೆ.ಪುಟ್ಟಸ್ವಾಮಿಗೌಡ ಅವರು 1992ರಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಿ, ಎಸ್.ಎಂ.ಕೃಷ್ಣ ಶಂಕುಸ್ಥಾಪನೆ ನೆರೆವೇರಿಸಿದ್ದರು. ಸ್ಪರ್ಧಾತ್ಮಕ ದಿನಗಳಲ್ಲಿ ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ ಹಾಜರಾಗುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಮಾರ್ಗದರ್ಶನ ಮತ್ತು ತರಬೇತಿ ನೀಡುವ ಉದ್ದೇಶದಿಂದ ಮೈಸೂರು, ಹಾಸನ, ತುಮಕೂರು, ಮಡಿಕೇರಿ, ಚಿಕ್ಕಮಗಳೂರು ಸೇರಿದಂತೆ 5 ಜಿಲ್ಲೆಗಳಲ್ಲಿ ಒಕ್ಕಲಿಗರ ಸಂಘದ ಸಹಯೋಗದಲ್ಲಿ ಪ್ರಾರಂಭಿಸಲಾಯಿತು ಎಂದು ತಿಳಿಸಿದರು.

    ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್ ಮಾತನಾಡಿ, ಉನ್ನತ ಹುದ್ದೆಗಳು ಹಣವಂತರ ಪಾಲಾಗದೆ, ಜಿಲ್ಲೆಯ ಸುತ್ತಮುತ್ತಲಿನ ಗ್ರಾಮೀಣ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಅವಕಾಶ ದೊರೆಯಬೇಕು. ಈ ಉದ್ದೇಶದಿಂದ ಕೃಷಿಕ್ ಫೌಂಡೇಶನ್ ಅವರನ್ನು ಸಂರ್ಪಸಿ ತಿಮ್ಮೇಗೌಡರ ಮಾರ್ಗದರ್ಶನದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಜೆವಿಎಸ್ ಶಾಲೆಯ ಆವರಣದಲ್ಲಿ ಜಾಗವನ್ನು ನೀಡಿ ಕಾರ್ಯಕ್ರಮ ಆರಂಭಿಸಲಾಯಿತು ಎಂದು ಹೇಳಿದರು.

    ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಂ.ಸಿ.ಪ್ರಕಾಶ್, ಡಾ. ಕೃಷ್ಣೇಗೌಡ, ಎಐಟಿ ರಿಜಿಸ್ಟರ್ ಡಾ.ಸಿ.ಕೆ.ಸುಬ್ಬರಾಯ್, ಕೆ.ಮೋಹನ್, ಡಾ.ಹೇಮಚಂದ್ರ, ಎಐಟಿ ಪ್ರಾಚಾರ್ಯ ಡಾ.ಜಯದೇವ, ಲಕ್ಷ್ಮಣ್​ಗೌಡ ಇದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts