More

    ಕೃಷಿಭೂಮಿ ಗುತ್ತಿಗೆ ನೀಡುವ ಕಾಯ್ದೆ ಹಿಂಪಡೆಯಿರಿ

    ಚಿಕ್ಕಬಳ್ಳಾಪುರ: ಖಾಸಗಿ ಕಂಪನಿಗಳಿಗೆ ಕೃಷಿಭೂಮಿ ಗುತ್ತಿಗೆ ನೀಡುವ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದ ಕರ್ನಾಟಕ ಪ್ರಾಂತ ರೈತಸಂಘ, ರೈತಸಂಘ ಮತ್ತು ಹಸಿರುಸೇನೆ ಕಾರ್ಯಕರ್ತರು ಉಪ ವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ರಾಜ್ಯದಲ್ಲಿನ ಬೀಳು ಭೂಮಿಯನ್ನು ಕೃಷಿಗೆ ಒಳಪಡಿಸುವ ಹೆಸರಿನಲ್ಲಿ ಖಾಸಗಿ ಕಾರ್ಪೋರೇಟ್ ಕಂಪನಿಗಳಿಗೆ ಗುತ್ತಿಗೆ ನೀಡಲು ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದ್ದು, ಇದರಿಂದ ಅನೇಕ ರೈತರು ಬೀದಿಗೆ ಬೀಳಲಿದ್ದಾರೆ ಎಂದು ಜಿಲ್ಲಾ ಪ್ರಾಂತ ರೈತ ಸಂಘದ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ ಆತಂಕ ವ್ಯಕ್ತಪಡಿಸಿದರು.

    ಸಾಗುವಳಿ ಚೀಟಿಗಾಗಿ ಅರ್ಜಿ ಸಲ್ಲಿಸಿ, ಚಾತಕ ಪಕ್ಷಿಗಳಂತೆ ಕಾಯುತ್ತಿರುವ ಅನ್ನದಾತರನ್ನು ಕಡೆಗಣಿಸಿ, ಬಂಡವಾಳಶಾಹಿಗಳಿಗೆ ಮಣೆ ಹಾಕಲಾಗುತ್ತಿದೆ ಎಂದರು.

    ದೈತ್ಯ ಕಂಪನಿಗಳ ಎದುರು ಸಾಮಾನ್ಯ ರೈತರು ಕೃಷಿಯಲ್ಲಿ ಪೈಪೋಟಿ ನಡೆಸಲು ಸಾಧ್ಯವಿಲ್ಲ. ನಿರುದ್ಯೋಗ, ವಲಸೆ, ಬಡತನ ಹೆಚ್ಚಾಗಲಿದೆ. ಭೂಮಿ ಕಿತ್ತುಕೊಳ್ಳುವ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಜಿಲ್ಲಾ ರೈತಸಂಘ, ಹಸಿರು ಸೇನೆ ಅಧ್ಯಕ್ಷ ಟಿ.ಲಕ್ಷ್ಮೀನಾರಾಯಣರೆಡ್ಡಿ ಒತ್ತಾಯಿಸಿದರು.

    ರಾಜ್ಯ ಸಮಿತಿ ಸದಸ್ಯರಾದ ಎಚ್.ಪಿ.ಲಕ್ಷ್ಮೀನಾರಾಯಣ, ಮಂಜುನಾಥ್ ರೆಡ್ಡಿ, ತಾಲೂಕು ಅಧ್ಯಕ್ಷರಾದ ಎಸ್.ಎನ್.ರವಿಪ್ರಕಾಶ್, ನಾರಾಯಣಸ್ವಾಮಿ, ಕರ್ನಾಟಕ ಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ, ಮುಖಂಡರಾದ ಎನ್.ವಾಣಿ, ಎನ್.ಕವಿತಾ, ಶ್ರೀನಿವಾಸ್, ಅರುಣ್ ಕುಮಾರ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts