More

    ಕೃಷಿ ಅಭಿವೃದ್ಧಿಗೆ ತಾಂತ್ರಿಕತೆ ಅಳವಡಿಕೆ ಅವಶ್ಯ

    ರಾಯಚೂರು: ಪ್ರಸ್ತುತ ದಿನಮಾನದಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಕೃಷಿ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳುವುದು ಅತ್ಯವಶ್ಯವಾಗಿದ್ದು, ಈ ನಿಟ್ಟಿನಲ್ಲಿ ಕೃಷಿ ತಾಂತ್ರಿಕ ಪದವೀಧರರು ರೈತರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಕೃಷಿ ವಿಜ್ಞಾನಗಳ ವಿವಿ ಶಿಕ್ಷಣ ನಿರ್ದೇಶಕ ಡಾ.ಎಂ.ಜಿ.ಪಾಟೀಲ್ ಹೇಳಿದರು.
    ಸ್ಥಳೀಯ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘದಿಂದ ಭಾನುವಾರ ಏರ್ಪಡಿಸಿದ್ದ ಸ್ನೇಹ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೃಷಿ ತಾಂತ್ರಿಕ ಪದವೀಧರರು ರೈತರಿಗೆ ಅಗತ್ಯವಿರುವ ತಾಂತ್ರಿಕತೆಯನ್ನು ಅಭಿವೃದ್ಧಿ ಪಡಿಸುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.
    ವಿಶ್ವದಲ್ಲಿ ಅತಿ ಹೆಚ್ಚಿನ ಉಷ್ಣತೆ ಇರುವ ದುಬೈನಲ್ಲಿ ನಮ್ಮ ಕೃಷಿ ಇಂಜಿನಿಯರಿಂಗ್ ಕಾಲೇಜಿನ ಪದವೀಧರರು ಲ್ಯಾಂಡ್ ಸ್ಕೇಪಿಂಗ್‌ನಲ್ಲಿ ಅತ್ಯದ್ಭುತ ಸಾಧನೆ ಮಾಡುವ ಮೂಲಕ ವಿವಿಯ ಗರಿಮೆಯನ್ನು ಹೆಚ್ಚಿಸಿದ್ದಾರೆ ಎಂದು ಹೇಳಿದರು.
    ವಿವಿ ಕುಲಸಚಿವ ಡಾ.ಎಂ.ವೀರನಗೌಡ ಮಾತನಾಡಿ, ಹಳೆ ವಿದ್ಯಾರ್ಥಿಗಳ ಸಂಘ ಸಕ್ರಿಯವಾಗಿ ಕಾರ್ಯನಿರ್ವಹಿಸುವ ಮೂಲಕ ಹಲವಾರು ರಚನಾತ್ಮಕ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ. ಕೃಷಿ ತಾಂತ್ರಿಕ ವಿದ್ಯಾರ್ಥಿಗಳ ಹಲವು ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ವಿವಿ ಎಲ್ಲ ರೀತಿಯಲ್ಲಿ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.
    ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಂಗಾಧರಯ್ಯ ಸುರೇಬಾನ ಮತ್ತು ಕಾರ್ಯದರ್ಶಿ ಡಾ.ವಿಜಯಕುಮಾರ ಪಲ್ಲೇದ ಸಂಘದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಕೃಷಿ ತಾಂತ್ರಿಕ ಮಹಾವಿದ್ಯಾಲಯದ ಡೀನ್ ಡಾ.ಎಂ.ನೇಮಿಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು.
    ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಯ್ಯ, ಮಹೀಂದ್ರಾ ಸಂಸ್ಥೆ ವಲಯ ವ್ಯವಸ್ಥಾಪಕ ಎಲ್.ಟಿ.ಭೀಮಶ್ಯಾ, ವಿವಿ ಪ್ರಾಧ್ಯಾಪಕರಾದ ಡಾ.ಉದಯಕುಮಾರ ನಿಡೋಣಿ, ಡಾ.ಪರಮಯ್ಯ ಮಠದ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts