More

    ಕೃಷಿ ಮಸೂದೆ ವಾಪಸ್ ಪಡೆಯಲು ಆಗ್ರಹ

    ಬೆಳಗಾವಿ: ವಿವಾದಿತ ಮೂರು ಕೃಷಿ ಮಸೂದೆಗಳನ್ನು ಕೇಂದ್ರದಂತೆ ರಾಜ್ಯ ಸರ್ಕಾರವೂ ಶಾಸನಬದ್ಧವಾಗಿ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರು ಸೋಮವಾರ ಬಾರುಕೋಲು ಚಳವಳಿ ನಡೆಸಿದರು. ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಬಾರುಕೋಲುಗಳ ಸಮೇತ ಪ್ರತಿಭಟಿಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು, ಸುವರ್ಣ ವಿಧಾನಸೌಧ ಸಮೀಪದ ಸುವರ್ಣ ಗಾರ್ಡನ್ ಬಳಿಯ ಪ್ರತಿಭಟನಾ ಸ್ಥಳಕ್ಕೆ ಬಿಟ್ಟರು.

    ಕೋಡಿಹಳ್ಳಿ ಚಂದ್ರಶೇಖರ ಮಾತನಾಡಿ, ಕಾಯ್ದೆಗಳನ್ನು ಕೇಂದ್ರ ಸರ್ಕಾರವೇ ಹಿಂಪಡೆದಿರುವಾಗ, ರಾಜ್ಯ ಸರ್ಕಾರಕ್ಕೆ ಏನಾಗಿದೆ? ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಪ್ರವಾಹ ಹಾಗೂ ಅತಿವೃಷ್ಟಿಯಿಂದ ಅಪಾರ ಹಾನಿಯಾಗಿದ್ದು, ರೈತರಿಗೆ ಕೂಡಲೇ ಸಮರ್ಪಕ ಪರಿಹಾರ ಕೊಡಬೇಕು. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಶಾಸನಬದ್ಧಗೊಳಿಸಬೇಕು. ಕಬ್ಬು ಬೆಳೆಗಾರರಿಗೆ ಸಮಯಕ್ಕೆ ಸರಿಯಾಗಿ ಬಿಲ್ ಪಾವತಿ ಮಾಡಬೇಕು ಎಂದು ಒತ್ತಾಯಿಸಿದರು. ಸಚಿವ ಭೈರತಿ ಬಸವರಾಜ್ ಮನವಿ ಸ್ವೀಕರಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಭೇಟಿ ಮಾಡಿಸುವುದಾಗಿ ಪದಾಕಾರಿಗಳನ್ನು ಆಹ್ವಾನಿಸಿದರು. ಪ್ರತಿಭಟನೆಯಲ್ಲಿ ಭೀಮಶಿ ಗಡಾದ, ಮಾಲತೇಶ ಪೂಜಾರ, ಕಾರ್ತಿಕ, ಸೋಮು ರೈನಾಪುರ ಹಾಗೂ ಶಂಕರ ಮೆದೆಹಳ್ಳಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts