More

    ಕೆಎಲ್‌ಇ ಸಂಸ್ಥೆಯ ಕೊಡುಗೆ ಅಪಾರ

    ಪುಣೆ: ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಕೆಎಲ್‌ಇ ಸಂಸ್ಥೆ ಪುಣೆಯಲ್ಲಿ ಮೆಡಿಕೋರ್ ಸಂಯಕ್ತಾಶ್ರಯದಲ್ಲಿ ನಿರ್ಮಿಸಿರುವ 300 ಹಾಸಿಗೆಗಳ ಆಸ್ಪತ್ರೆಯಿಂದ ಈ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಲಿದೆ ಎಂದು ಎನ್‌ಸಿಪಿ ಅಧ್ಯಕ್ಷ ಶರದ ಪವಾರ್ ಹೇಳಿದರು.

    ನಗರದಲ್ಲಿ ಕೆಎಲ್‌ಇ ಸಂಸ್ಥೆ ವತಿಯಿಂದ ಸ್ಥಾಪನೆಯಾದ 300 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಸಂಸ್ಥೆ ಸ್ಥಾಪಿಸಿರುವ ಸಪ್ತರ್ಷಿಗಳ ಕನಸು ನನಸಾಗಿಸಲು ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಶ್ರಮಿಸುತ್ತಿದ್ದಾರೆ. ಕೆಎಲ್‌ಇ ಸಂಸ್ಥೆಗೆ ಎಲ್ಲ ರೀತಿ ಸಹಕಾರ ನೀಡಲಾಗುವುದು. ಕೆಎಲ್‌ಇ ಸಂಸ್ಥೆಯ ಶೈಕ್ಷಣಿಕ ಹಾಗೂ ಆರೋಗ್ಯ ಸೇವೆ ಅಪಾರ ಎಂದರು.

    ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಮಾತನಾಡಿ, ಬಡ ಜನರ ಮತ್ತು ರೈತರ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ದೊರಕಬೇಕು ಎಂದು ಸಪ್ತರ್ಷಿಗಳು ಶಿಕ್ಷಣ ಸಂಸ್ಥೆ ಹುಟ್ಟುಹಾಕಿದರು. ಸಂಸ್ಥೆಯಲ್ಲಿ ಶಿಕ್ಷಣ ಪಡೆದ ಹಲವು ದೇಶದ ಮೂಲೆ ಮೂಲೆಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು. ಸಂಸದ ಶ್ರೀರಂಗ ಬಾರ್ನೆ, ಶಾಸಕ ಮಹೇಶ ಲಾಂಡಗಿ, ಕೆಎಲ್‌ಇ ಅಧ್ಯಕ್ಷ ಮಹಾಂತೇಶ ಕೌಜಲಗಿ, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ಡಾ.ವಿ.ಎಸ್.ಸಾಧುನವರ, ಬಿ.ಆರ್.ಪಾಟೀಲ, ಅಮಿತ ಕೋರೆ ಇತರರಿದ್ದರು.

    ಕೆಎಲ್‌ಇ ಶಿಕ್ಷಣ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಹಾಗೂ ನನ್ನ ನಡುವೆ ಅವಿನಾಭಾವ ಸಂಬಂಧವಿದೆ. ಸಂಸ್ಥೆಯ ಒಳ್ಳೆಯ ಕೆಲಸಕ್ಕೆ ನನಗೆ ಪ್ರಥಮ ಆಮಂತ್ರಣ ನೀಡುತ್ತಾರೆ. ಶಿಕ್ಷಣ ಸಂಸ್ಥೆಗೆ ಸದಾಕಾಲ ನನ್ನ ಸಹಕಾರ ಇರುತ್ತದೆ.
    | ಶರದ ಪವಾರ್, ಎನ್‌ಸಿಪಿ ಅಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts