More

    ಕೆಎಲ್​ಇ ಆಸ್ಪತ್ರೆ ಮಾಹಿತಿ ಕೇಂದ್ರಕ್ಕೆ ಚಾಲನೆ

    ಹಾವೇರಿ: ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸುತ್ತಿರುವ ಕೆಎಲ್​ಇ ಸಂಸ್ಥೆ ಇದೀಗ ವೈದ್ಯಕೀಯ ರಂಗದಲ್ಲಿಯೂ ತನ್ನ ವ್ಯಾಪ್ತಿಯನ್ನು ವಿಸ್ತರಿಸಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ. ಈಗ ಹಾವೇರಿ ಜಿಲ್ಲೆಯ ಜನತೆಗೆ ವೈದ್ಯಕೀಯ ಸೇವೆ ನೀಡಲು ಸನ್ನದ್ಧವಾಗಿರುವುದು ಸಂತಸ ತಂದಿದೆ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.

    ನಗರದ ಡಾ. ಜಿ.ವಿ. ಪಂಡಿತ ಆಸ್ಪತ್ರೆಯ ಮೊದಲ ಮಹಡಿಯಲ್ಲಿ ನೂತನವಾಗಿ ಸ್ಥಾಪಿಸಲಾದ ಕೆಎಲ್​ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಸಂಪರ್ಕ ಮತ್ತು ಮಾಹಿತಿ ಕೇಂದ್ರಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

    ಜಿಲ್ಲೆಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವಾ ಕೇಂದ್ರ ಅತ್ಯವಶ್ಯವಾಗಿದ್ದು, ಮುಂಬರುವ ದಿನಗಳಲ್ಲಿ ಪೂರ್ಣ ಪ್ರಮಾಣದ ಸುಸಜ್ಜಿತ ಆಸ್ಪತ್ರೆ ಪ್ರಾರಂಭಗೊಳಿಸಿ ಈ ಭಾಗದ ಜನರಿಗೆ ಅನುಕೂಲ ಕಲ್ಪಿಸಿಕೊಡಬೇಕು. ಆಸ್ಪತ್ರೆ ನಿರ್ವಣಕ್ಕೆ ಅವಶ್ಯವಿರುವ ಸಕಲ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

    ಅಧ್ಯಕ್ಷತೆ ವಹಿಸಿದ್ದ ಕೆಎಲ್​ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಮಾತನಾಡಿ, ಪ್ರಜಾಪ್ರಭುತ್ವದ ತಳಹದಿಯ ಮೇಲೆ ರೂಪುಗೊಂಡಿರುವ ಕೆಎಲ್​ಇ ಸಂಸ್ಥೆ ಶಿಕ್ಷಣದ ಜೊತೆಗೆ ಸಮಾಜಕಟ್ಟುವ ಕಾರ್ಯ ಮಾಡುತ್ತಿದೆ. ಬಹುಮುಖಿ ಕಾರ್ಯಗಳ ಜೊತೆಗೆ ಸಂಶೋಧನೆ, ತಂತ್ರಜ್ಞಾನ, ಉನ್ನತ ಶಿಕ್ಷಣ, ಮಹಿಳೆ ಮತ್ತು ಮಕ್ಕಳ ಆರೋಗ್ಯದ ಕಾಳಜಿ ವಹಿಸುತ್ತಿದೆ. ಈ ಭಾಗದಲ್ಲಿಯೂ ಮುಂಬರುವ ದಿನಗಳಲ್ಲಿ ಸುಸಜ್ಜಿತವಾದ ಆಸ್ಪತ್ರೆ ನಿರ್ವಿುಸಲಾಗುವುದು. ಅದರ ಪೂರ್ವ ನಿಯೋಜಿತವಾಗಿ ಸಾರ್ವಜನಿಕ ಸಂಪರ್ಕ ಮತ್ತು ಮಾಹಿತಿ ಕೇಂದ್ರ ಆರಂಭಿಸಲಾಗಿದೆ. ನಮ್ಮ ಸಂಸ್ಥೆ ಗ್ರಾಮೀಣ ಭಾಗಗಳ ರೈತರ ಮಕ್ಕಳ ಕಲ್ಯಾಣಕ್ಕೆ ಶ್ರಮಿಸಿದೆ. ಅವರಿಗೆ ಉತ್ತಮವಾದ ಆರೋಗ್ಯ ಸೇವೆಗಳನ್ನು ನೀಡಿ ಜನತೆಯ ವಿಶ್ವಾಸಕ್ಕೆ ಪಾತ್ರವಾಗಿದೆ ಎಂದರು.

    ಸಂಸ್ಥೆಯ ಉಪಾಧ್ಯಕ್ಷ ಎಂ.ಸಿ. ಕೊಳ್ಳಿ ಮಾತನಾಡಿದರು. ಪದಾಧಿಕಾರಿಗಳಾದ ಶಂಕ್ರಣ್ಣ ಮುನವಳ್ಳಿ, ಡಾ. ವಿ.ಎಸ್. ಸಾಧುನವರ, ಎಸ್.ಸಿ. ಮೆಟಗುಡ್ಡ, ಬಿ.ಎಸ್. ತಟವಟಿ, ಶಾಸಕ ನೆಹರು ಓಲೇಕಾರ, ಬೆಳಗಾವಿ ಕೆಎಲ್​ಇ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಎಂ.ವಿ. ಜಾಲಿ, ಡೈರೆಕ್ಟರ್ ಕ್ಲಿನಿಕಲ್ ಸರ್ವಿಸಸ್​ನ ಡಾ. ಆರ್.ಬಿ. ನೇರ್ಲಿ, ಡಾ. ಸುದೀಪ ಪಂಡಿತ, ಡಾ. ಅಂಜು ಪಂಡಿತ ಇತರರಿದ್ದರು.

    ಕೆಎಲ್​ಇ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಜಿ.ಎಚ್. ಕಾಲೇಜ್ ಸ್ಥಾನಿಕ ಮಂಡಳಿ ಕಾರ್ಯಾಧ್ಯಕ್ಷ ಪಿ.ಡಿ. ಶಿರೂರ ಸ್ವಾಗತಿಸಿದರು. ಡಾ. ಜಿ.ವಿ. ಸಾಲಿಮಠ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts