More

    ಕೆಕೆಆರ್​​ಡಿಬಿ ಕಾಮಗಾರಿ ಶೀಘ್ರ ಮುಗಿಸಿ

    ಬೀದರ್: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಯೋಜನೆಯಡಿ ಜಿಲ್ಲೆಯಲ್ಲಿ ಕೈಗೊಂಡ ಎಲ್ಲ ಕಾಮಗಾರಿಗಳು ನಿಗದಿತ ಅವಧಿಯೊಳಗೆ ಮುಗಿಸುವಂತೆ ಜಿಲ್ಲಾಧಿಕಾರಿ ಡಾ. ಎಚ್.ಆರ್.ಮಹಾದೇವ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
    ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಂಡಳಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಇನ್ನೂ ಆರಂಭವಾಗದಿರುವ ಕೆಲಸಗಳಿಗೆ ಬೇಗ ಚಾಲನೆ ನೀಡಬೇಕು. ಚಾಲ್ತಿಯಲ್ಲಿರುವ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಈಗಾಗಲೇ ಕೆಲಸಗಳು ಪೂರ್ಣಗೊಂಡಲ್ಲಿ ಅನುದಾನ ಖರ್ಚು ಮಾಡುವ ಕುರಿತು ಚರ್ಚಿಸಿ, ಸೂಕ್ತ ಯೋಜನೆ ರೂಪಿಸಿಕೊಂಡು ಕಾರ್ಯಪ್ರವೃತ್ತ ಆಗುವಂತೆ ಸೂಚಿಸಿದರು.
    ಬೀದರ್ ನಗರಸಭೆಯಿಂದ 2016-17, 2018-19ನೇ ಸಾಲಿನ ಹಳೆಯ ಕಾಮಗಾರಿ ಮುಗಿಸಬೇಕಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು. ನಗರಸಭೆ ಆಯುಕ್ತ ಬಿ.ಬಸಪ್ಪ ಮಾತನಾಡಿ, ಹಳೆಯ ಎಲ್ಲ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಮಾಹಿತಿ ಮಾತ್ರ ವೆಬ್ಸೈಟ್ನಲ್ಲಿ ಅಳವಡಿಸಬೇಕಿದೆ ಎಂದು ತಿಳಿಸಿದರು.
    ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ನಡೆಯುತ್ತಿರುವ ಕಾಮಗಾರಿಗಳಲ್ಲಿ ಹಲವು ಕಟ್ಟಡ ಕಾಮಗಾರಿಗಳು, ಸಿಸಿ ರಸ್ತೆ, ಒಳಚರಂಡಿ ಕಾಮಗಾರಿ ಅಂತಿಮ ಹಂತದಲ್ಲಿದ್ದರೂ ಅನುದಾನ ಖರ್ಚು ಮಾಡದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಕಾಮಗಾರಿ ಪೂರ್ಣಗೊಳಿಸುವಲ್ಲಿ ನಿರ್ಲಕ್ಷ್ಯತನ ತೋರಿಸುವ ಎಲ್ಲ ಅನುಷ್ಠಾನಾಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಬೇಕೆಂದು ಹೇಳಿದರು.
    ಶಿಕ್ಷಣ, ಆರೋಗ್ಯ, ಬಿಸಿಎಂ, ಸಮಾಜಕಲ್ಯಾಣ ಸೇರಿ ವಿವಿಧ ಇಲಾಖೆ ಅಧಿಕಾರಿಗಳಿಂದ ಕೆಕೆಆರ್ಡಿಬಿ ಕಾಮಗಾರಿ ಸ್ಥಿತಿಗತಿ ವಿವರಣೆ ಪಡೆದರು. ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ, ಅಪರ ಡಿಸಿ ರುದ್ರೇಶ ಗಾಳಿ, ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts