More

    ಕೆಡಿಪಿ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್

    ಚಿತ್ರದುರ್ಗ: ತಾಪಂ ತ್ರೈಮಾಸಿಕ ಕೆಡಿಪಿ ಸಭೆಗೆ ಗೈರು ಹಾಜರಾದ ಹಲವು ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ತಾಪಂ ಇಒಗೆ ಸೂಚಿಸಿದರು.
    ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಗೆ ಬಾರದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು,ಅಧಿಕಾರಿಗಳ ಪರವಾಗಿ ಬಂದವರು ಸಭೆಯಲ್ಲಿ ಇರುವುದು ಬೇಡ. ಗೈರಾದ ಅಧಿಕಾರಿಗಳಿಗೆ ಷೋಕಾಸ್ ನೋಟಿಸ್ ಕೊಡಿ ಎಂದು ಸೂಚಿಸಿದರು. ಕಚೇರಿಗಳಿಗೆ ಬರುವಂಥ ಸಾರ್ವಜನಿಕರನ್ನು ವಿನಾ ಕಾರಣ ಅಲೆದಾಡಿಸಬಾರದು. ಹಲವು ಕಚೇರಿಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಇದ್ದ ರೂ ಕೆಲಸ ಮಾಡುತ್ತಿಲ್ಲ. ಅಧಿಕಾರಿ,ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕಚೇರಿಗಳಲ್ಲಿದ್ದು ಕರ್ತವ್ಯ ನಿರ್ವಹಿಸುವಂತೆ ತಾಕೀತು ಮಾಡಿದರು.
    ಗ್ರಾಪಂ ಪಿಡಿಒಗಳ ಪ್ರತ್ಯೇಕ ಸಭೆ ಕರೆಯುತ್ತೇನೆ,ಆ ಅವಧಿಯೊಳಗೆ ಯಾವುದೇ ಗ್ರಾಮಕ್ಕೆ ತಾವು ಭೇಟಿ ನೀಡಿದ ಸಂದರ್ಭದಲ್ಲಿ ಸ್ವಚ್ಛ ತೆ ಮತ್ತಿತರ ಮೂಲ ಸೌಕರ್ಯಗಳ ಸಮಸ್ಯೆಗಳಿದ್ದರೆ ಶಿಸ್ತು ಕ್ರಮಕ್ಕೆ ಸೂಚಿಸುವುದಾಗಿ ಪಿಡಿಒಗಳನ್ನು ಎಚ್ಚರಿಸಿದರು. ಎಲ್ಲೆಲ್ಲಿ ಕುಡಿವ ನೀರಿ ನ ಘಟಕಗಳು ಹಾಳಾಗಿವೆ ಅವುಗಳನ್ನು ಕೂಡಲೇ ಸರಿಪಡಿಸ ಬೇಕೆಂದರು.
    ವಿವಿಧ ಇಲಾಖೆಗಳ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಮೂಲ ಸೌಕರ್ಯಗಳಲ್ಲಿ ಕೊರತೆ ಆಗಬಾರದು. ಈ ಸಂಬಂಧ ಹಾಸ್ಟೆಲ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡುವುದಾಗಿ ತಿಳಿಸಿದರು. ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಸಮರ್ಪಕವಾಗಿ ಆಗ ಬೇಕೆಂದರು.
    ಅಗತ್ಯ ಕಾಮಗಾರಿಗಳಿಗೆ ಅನುದಾನದ ಅಗತ್ಯವಿದ್ದರೆ ತಮ್ಮ ಗಮನಕ್ಕೆ ತರುವಂತೆ ಅಧಿಕಾರಿಗಳಿಗ ಸೂಚಿಸಿದರು. ದೇವರ ಎತ್ತುಗಳು ಸೇರಿದಂತೆ ಜಾನುವಾರುಗಳಿಗೆ ಮೇವು,ಕುಡಿವ ನೀರು ಹಾಗೂ ಜನರಿಗೆ ಕುಡಿವ ನೀರಿನ ತೊಂದರೆ ಆಗಬಾರದೆಂದರು.
    ತಾಪಂ ಆಡಳಿತಾಧಿಕಾರಿ,ಜಿಲ್ಲಾ ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಬಿ.ಆನಂದ್ ಮಾತನಾಡಿ,ತಾಲೂಕಿನಲ್ಲಿ ಮುಂದಿನ ಮೇ ವ ರೆಗೂ ಜಾನುವಾರುಗಳಿಗೆ ಅಗತ್ಯ ಮೇವಿಗಾಗಿ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು. ಬರಗಾಲದ ಹಿನ್ನೆಲೆಯಲ್ಲಿ ನರೇಗಾದಡಿ ಕೆಲಸ ಕೊಡುವಂತೆ ಕೃಷಿ,ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
    ಶಾಲಾ-ಕಾಲೇಜುಗಳಲ್ಲಿ ಶೌಚಗೃಹಗಳ ಸಮಸ್ಯೆ ಇರಬಾರದೆಂದು ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಎಚ್ಚರಿಸಿದರು.
    ತಾಪಂ ಇಒ ಎಚ್.ಹನುಮಂತಪ್ಪ, ತಹಸೀಲ್ದಾರ್ ಡಾ.ನಾಗವೇಣಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿದ್ದರು.

    (ಸಿಟಿಡಿ 18 ಟಿಪಿ ಕೆಡಿಪಿ)
    ಚಿತ್ರದುರ್ಗದಲ್ಲಿ ಬುಧವಾರ ಏರ್ಪಡಿಸಿದ್ದ ತಾಪಂ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಕೆ.ಸಿ.ವೀರೇಂದ್ರಪಪ್ಪಿ,ಆಡಳಿತಾಧಿಕಾರಿ ಬಿ.ಆನಂದ್,ಇಒ ಎಚ್.ಹನುಮಂತಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts