More

    ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಪ್ರಸ್ತಾವನೆ

    ಕಾರವಾರ: ಅಂಕೋಲಾದಲ್ಲಿ ಗಂಗಾವಳಿ ನದಿಯಿಂದ ಹಾಗೂ ಕಾರವಾರದಲ್ಲಿ ಕಾಳಿ ನದಿಯಿಂದ ಕೆರೆಗಳಿಗೆ ನೀರು ತುಂಬಿಸುವ ಸುಮಾರು 50 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.

    ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯ ಹಿಂದ ನಿರ್ವಿುಸಿರುವ ಬಾಡ ಹೋಬಳಿಯ ರೈತ ಸಂಪರ್ಕ ಕೇಂದ್ರದ 50 ಲಕ್ಷ ರೂ. ವೆಚ್ಚದ ನೂತನ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

    ಕೃಷಿ ಉತ್ತೇಜನಕ್ಕೆ ಸರ್ಕಾರ ಬದ್ಧ ಈ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದರು. ರಾಜ್ಯದ ಇತರ ಜಿಲ್ಲೆಗಳ ಕಟ್ಟಡ ವಿನ್ಯಾಸವನ್ನು ಕರಾವಳಿಗೆ ಅನ್ವಯಿಸದೇ ಇಲ್ಲಿಯ ಭಾರಿ ಮಳೆ ಹಾಗೂ ಉಪ್ಪು ನೀರಿಗೆ ಹೊಂದಿಕೆಯಾಗುವಂಥ ಕಟ್ಟಡ ವಿನ್ಯಾಸ ಮಾಡಿ ಅದಕ್ಕೆ ರಾಜ್ಯಮಟ್ಟದ ಅನುಮೋದನೆ ಪಡೆಯಿರಿ ಎಂದು ನಿರ್ವಿುತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು.

    ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಉಪಾಧ್ಯಕ್ಷ ಪ್ರಕಾಶ ನಾಯ್ಕ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ ವೇದಿಕೆಯಲ್ಲಿದ್ದರು.

    ಕೃಷಿ ವಿಧೇಯಕದ ತಿದ್ದುಪಡಿ ಉದ್ದೇಶ ಅರ್ಥ ಮಾಡಿಕೊಳ್ಳಿ
    ಮಧ್ಯವರ್ತಿಗಳಿಂದ ರೈತರಿಗೆ ನಷ್ಟವಾಗದಂತೆ ತಡೆಯಲು ಕೃಷಿ ವಿಧೇಯಕಕ್ಕೆ ತಿದ್ದುಪಡಿ ತರಲಾಗಿದೆ. ಆದರೆ, ಅದನ್ನು ಅರ್ಥಮಾಡಿಕೊಳ್ಳದೇ ಕೆಲವರು ರಾಜಕೀಯ ಉದ್ದೇಶ ಮಾತ್ರಕ್ಕೆ ವಿರೋಧಿಸುತ್ತಿದ್ದಾರೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರತ್ನಾಕರ ಹೆಗಡೆ ಹೇಳಿದರು. 50 ಲಕ್ಷ ರೂ. ವೆಚ್ಚದ ಅಂಕೋಲಾ ತಾಲೂಕಿನ ವಂದಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರದ ಕಟ್ಟಡವನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಾಸಕಿ ರೂಪಾಲಿ ನಾಯ್ಕ ಕಟ್ಟಡ ಉದ್ಘಾಟಿಸಿದರು. ಪುರಸಭೆ ಅಧ್ಯಕ್ಷೆ ಶಾಂತಾಲಾ ನಾಡಕರ್ಣಿ, ತಾ.ಪಂ. ಅಧ್ಯಕ್ಷೆ ಸುಜಾತಾ ಗಾಂವಕರ, ಜಿ.ಪಂ. ಸದಸ್ಯ ಜಗದೀಶ ಜಿ.ನಾಯಕ ಮೊಗಟಾ, ಪುರಸಭೆ ಉಪಾಧ್ಯಕ್ಷೆ ರೇಖಾ ಗಾಂವಕರ, ಸದಸ್ಯೆ ಹೇಮಾ ಆಗೇರ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ನಾಯ್ಕ, ಸದಸ್ಯೆ ಶಾಂತಿ ಆಗೇರ, ಸಹಾಯಕ ಕೃಷಿ ನಿರ್ದೇಶಕ ಶ್ರೀಧರ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಈ ವೇಳೆ ಶಾಸಕಿ ರೂಪಾಲಿ ನಾಯ್ಕ ಅವರು ಪಶು ವೈದ್ಯಕೀಯ ಇಲಾಖೆ ಕಟ್ಟಡವನ್ನೂ ಉದ್ಘಾಟಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts