More

    ಕೆರೆ ಅಭಿವೃದ್ಧಿ ಕೆಲಸದಲ್ಲಿ ಗುಣಮಟ್ಟ ಕಾಪಾಡಿ

    ಹುಮನಾಬಾದ್: ಕೆರೆಗಳ ಅಭಿವೃದ್ಧಿಗಾಗಿ ಅಮೃತ ಸರೋವರ ಯೋಜನೆಯಡಿ ಕೈಗೊಂಡ ಕಾಮಗಾರಿಗಳು ಗುಣಮಟ್ಟದಿಂದ ನಡೆಯುವಂತೆ ಸಂಬಂಧಿತ ಅಧಿಕಾರಗಳು ವಿಶೇಷ ಗಮನ ಹರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಕಬೀರಾಬಾದ್ ಗ್ರಾಮದಲ್ಲಿ ನಡೆಯುತ್ತಿರುವ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಶುಕ್ರವಾರ ಪರಿಶೀಸಿದ ಅವರು, ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸಕರ್ಾರ ರಾಜ್ಯದ ಕೆರೆಗಳ ಪುನರುಜ್ಜೀವನ ಸಲುವಾಗಿ ಅಮೃತ ಸರೋವರ ಯೋಜನೆಯನ್ನು ಉದ್ಯೋಗ ಖಾತ್ರಿ ಅಡಿಯಲ್ಲಿ ಜಾರಿಗೊಳಿಸಿದೆ. ಅದರಂತೆ ತಾಲೂಕಿನಲ್ಲಿ 11 ಕೆರೆಗಳ ಸಮಗ್ರ ಅಭಿವೃದ್ಧಿ ಕೆಲಸ ಕೈಗೆತ್ತಿಕೊಳ್ಳಲಾಗಿದೆ ಎಂದರು.

    ಕೆರೆ ಅಭಿವೃದ್ಧಿಯಿಂದ ಅಂತರ್ಜಲ ಮಟ್ಟ ಹೆಚ್ಚಳವಾಗುತ್ತದೆ. ಸಾರ್ವಜನಿಕ ಪ್ರೇಕ್ಷಣಿಯ ತಾಣವಾಗುವಂತೆ ಅಭಿವೃದ್ಧಿಯಾಗಬೇಕು. ಇಲ್ಲಿ ನಡೆಯುತ್ತಿರುವ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಸ್ಥಳೀಯರು ನಿಗಾ ವಹಿಸಬೇಕು. ಕಳಪೆ ಕಂಡುಬಂದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು.

    ಕಾಮಗಾರಿಯಲ್ಲಿ ಕಳಪೆ ಕಂಡುಬಂದಲ್ಲಿ ಮುಲಾಜಿಲ್ಲದೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ತಹಸೀಲ್ದಾರ್ ಪ್ರದೀಪಕುಮಾರ, ತಾಪಂ ಇಒ ಡಾ.ಗೋವಿಂದ, ಪಂಚಾಯತ್ ರಾಜ್ ಇಲಾಖೆ ಸಹಾಯಕ ಅಭಿಯಂತರ ಶಿವಕುಮಾರ ಕವಟಗಿ, ತಾನಾಜಿ ಪಾಟೀಲ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts