More

    ಕೆರೆ ತುಂಬಿಸಲು ಕಾಲುವೆಗೆ ನೀರು ಹರಿಸಿ

    ಆಲಮಟ್ಟಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಹರಿಸಿ, ಅವುಗಳ ಮೂಲಕ ಕೆರೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಶುಕ್ರವಾರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.

    ರಾಮಲಿಂಗೇಶ್ವರ ದೇವಸ್ಥಾನದಿಂದ ಮುಖ್ಯ ಇಂಜಿನಿಯರ್ ಕಚೇರಿವರೆಗೆ ಹಲಗೆ ವಾದನ ಮೂಲಕ ಮೆರವಣಿಗೆ ನಡೆಸಿ ನೀರು ಹರಿಸಲು ಆಗ್ರಹಿಸಿದರು. ಮುಖ್ಯ ಇಂಜಿನಿಯರ್ ಕಚೇರಿ ಎದುರು ರೈತ ಸಂಘದ ಕಾರ್ಯಕರ್ತರು ಕೆಬಿಜೆಎನ್‌ಎಲ್ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

    ಜಿಲ್ಲಾ ಘಟಕದ ಅಧ್ಯಕ್ಷ ನಿಂಗರಾಜ ಆಲೂರ, ನಿಡಗುಂದಿ ತಾಲೂಕು ಘಟಕದ ಅಧ್ಯಕ್ಷ ಸೀತಪ್ಪ ಗಣಿ ಮಾತನಾಡಿ, ಬಿಸಿಲಿನ ಪ್ರಖರತೆ ಹೆಚ್ಚಿದೆ. ಜಲಾಶಯದಲ್ಲಿ ನೀರಿನ ಸಂಗ್ರಹ ಸಾಕಷ್ಟಿದ್ದು, ಕೆರೆಗಳು ಸಂಪೂರ್ಣ ಒಣಗಿವೆ, ಅಂತರ್ಜಲ ಮಟ್ಟವೂ ಕುಸಿದಿದೆ. ತಕ್ಷಣವೇ ಕಾಲುವೆಗೆ ನೀರು ಹರಿಸಿ ಜಿಲ್ಲೆಯ ಕೆರೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

    ಮುಖ್ಯ ಇಂಜಿನಿಯರ್ ಎಚ್.ಎನ್. ಶ್ರೀನಿವಾಸ ಮನವಿ ಸ್ವೀಕರಿಸಿ ಮಾತನಾಡಿ, ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿ ಯೋಜನೆಯಡಿಯ ಕೆರೆಗಳನ್ನು ತುಂಬಿಸಲು ನೀರನ್ನು ಫೆ.19 ರಿಂದ ಬಳಸಿಕೊಳ್ಳಲು ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ಅನುಮತಿ ನೀಡಿದ್ದಾರೆ ಎಂದರು.

    ಸಾಬಣ್ಣ ಅಂಗಡಿ, ರವಿ ಕೋತಿನ, ಪೀರಸಾಬ್ ನದಾಫ್, ವೆಂಕಟೇಶ ವಡ್ಡರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts