More

    ಕೆರೆ ನೀರು ತುಂಬಿಸಲು ಯೋಜನೆ ತಯಾರಿ

    ಪಾಂಡವಪುರ: ಮಾಣಿಕ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಕೆರೆಗಳನ್ನು ಏತ ನೀರಾವರಿ ಮೂಲಕ ತುಂಬಿಸಲು ಸಣ್ಣ ನೀರಾವರಿ ಇಲಾಖೆಯಿಂದ ಯೋಜನೆ ತಯಾರಿಸಲಾಗುತ್ತಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.

    ತಾಲೂಕಿನ ಮಾಣಿಕ್ಯನಹಳ್ಳಿ ಮತ್ತು ಲಕ್ಷ್ಮೀಸಾಗರ ಗ್ರಾಪಂ ವ್ಯಾಪ್ತಿಯ ಮತದಾರರಿಗೆ ಸೋಮವಾರ ಕೃತಜ್ಞತೆ ಸಲ್ಲಿಸಿ ಅವರು ಮಾತನಾಡಿದರು. ಮಾಣಿಕ್ಯನಹಳ್ಳಿ ಸುತ್ತಮುತ್ತಲಿನ ರೈತರ ಕೃಷಿ ಭೂಮಿಗೆ ನೀರಿನ ಕೊರತೆ ಇದ್ದು, ರೈತರು ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಯೋಜನೆಯ ರೂಪುರೇಷೆ ತಯಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಬಳಿಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುದಾನ ಪಡೆದು ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದರು.

    ಈ ಭಾಗದ ಅನೇಕ ಗ್ರಾಮಗಳ ಸಂಪರ್ಕ ರಸ್ತೆ ಹದಗೆಟ್ಟಿದ್ದು, ಉತ್ತಮ ರಸ್ತೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅದಕ್ಕೆ ಅಗತ್ಯ ಯೋಜನೆ ರೂಪಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಇದೇ ವೇಳೆ ಬೆಳಾಳ್ಳೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ದರ್ಶನ್ ಪುಟ್ಟಣ್ಣಯ್ಯ ಅವರು ಆಸ್ಪತ್ರೆ ಸ್ವಚ್ಛತೆ ಹಾಗೂ ರೋಗಿಗಳಿಗೆ 24 ಗಂಟೆ ವೈದ್ಯರ ಸೇವೆ ಮತ್ತು ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರಲ್ಲದೆ, ವಿಶ್ರಾಂತಿ ಕೊಠಡಿ ನಿರ್ಮಾಣಕ್ಕೆ ಅನುದಾನ ನೀಡುವುದಾಗಿ ಹೇಳಿದರು. ಗ್ರಾಪಂ ಮಾಜಿ ಅಧ್ಯಕ್ಷ ಕೆಂಪೇಗೌಡ, ಕಾಂಗ್ರೆಸ್ ಮುಖಂಡರಾದ ರವಿ, ಮಹೇಶ, ಧನಪಾಲ್, ಶಿವಕುಮಾರ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts