More

    ಕೆ.ಆರ್.ಪೇಟೆಯಲ್ಲಿ ಎಳ್ಳು-ಬೆಲ್ಲ ಹಂಚಿ ಸಂಭ್ರಮ

    ಕೆ.ಆರ್.ಪೇಟೆ: ರೈತರಿಗೆ ಸುಗ್ಗಿ ತರುವ ಸೂರ್ಯನು ತನ್ನ ಪಥವನ್ನು ಬದಲಿಸುವ ಸಂಕ್ರಾಂತಿ ಹಬ್ಬವನ್ನು ತಾಲೂಕಿನಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.


    ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆಗಳು, ಅಭಿಷೇಕಗಳು ನಡೆದವು. ಬೆಳಗ್ಗೆಯಿಂದಲೇ ಕೊರೆವ ಚಳಿಯನ್ನೂ ಲೆಕ್ಕಿಸದೆ ಮಹಿಳೆಯರು ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡು ಕೃತಾರ್ಥರಾದರು.


    ಪಟ್ಟಣದ ಶಿವನ ದೇವಾಲಯ, ಗಣೇಶನ ದೇವಾಲಯ, ಶ್ರೀ ಆಂಜನೇಯಸ್ವಾಮಿ ದೇವಾಲಯ, ಈಶ್ವರ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಿಗೆ ಭಕ್ತರ ದಂಡೇ ಹರಿದುಬಂದಿತ್ತು. ದೇವಾಲಯಗಳನ್ನು ವಿದ್ಯುತ್ ದೀಪಾಲಂಕಾರ, ಮಾವಿನ ತೋರಣ, ವಿವಿಧ ಹೂವಿನ ಅಲಂಕಾರದಿಂದ ಕಂಗೊಳಿಸಿದವು. ಬಾಳೆಕಂದು, ಕಬ್ಬಿನ ಗರಿಯನ್ನು ದೇವಸ್ಥಾನದ ಬಾಗಿಲಿಗೆ ಕಟ್ಟಲಾಗಿತ್ತು. ದೇವರನ್ನು ವಿವಿಧ ಹೂವು, ಅಲಂಕಾರಿಕ ವಸ್ತುಗಳಿಂದ ಅಲಂಕರಿಸಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ಬಂದು ಪೂಜೆ ಸಲ್ಲಿಸಿ ಭಕ್ತಿಭಾವದಿಂದ ಪೂಜೆ ಸಲ್ಲಿಸುತ್ತಿದ್ದರು.


    ಹೆಣ್ಣುಮಕ್ಕಳು, ಮಹಿಳೆಯರು ಹೊಸ ಬಟ್ಟೆಯನ್ನು ಧರಿಸಿ ತಮ್ಮ ನೆರೆಹೊರೆಯವರಿಗೆ, ಸ್ನೇಹಿತರಿಗೆ ಹಾಗೂ ಸಂಬಂಧಿಕರ ಮನೆಗಳಿಗೆ ತೆರಳಿ ಎಳ್ಳು-ಬೆಲ್ಲವನ್ನು ವಿತರಿಸಿ ಹಬ್ಬದ ಶುಭಾಶಯಗಳನ್ನು ವಿನಿಯಮ ಮಾಡಿಕೊಂಡು ಸಂಭ್ರಮಿಸಿದರು. ರೈತರು ಕೃಷಿ ಉತ್ಪನ್ನಗಳಿಗೆ ಪೂಜೆ ಸಲ್ಲಿಸಿದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts