More

    ಕೆ.ಸಾಲುಂಡಿ ಕಲುಷಿತ ನೀರು ಪ್ರಕರಣ : ವರದಿ ನೀಡುವಂತೆ ಸಿಎಂ ಸೂಚನೆ

    ಮೈಸೂರು: ಕೆ.ಸಾಲುಂಡಿ ಗ್ರಾಮದಲ್ಲಿ ಅಶುದ್ಧ ನೀರು ಸೇವಿಸಿ ಅಸ್ವಸ್ಥಗೊಂಡಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.

    ಕಲುಷಿತ ನೀರು ಸೇವಿಸಿ ಹಲವು ಜನರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವರದಿಯನ್ನು ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

    ಕುಡಿಯುವ ನೀರಿಗೆ ಮಳೆ ನೀರು ಅಥವಾ ಕಲುಷಿತ ನೀರು ಸೇರ್ಪಡೆಗೊಂಡು ಆ ನೀರನ್ನು ಸೇವಿಸಿ ಕೆ.ಸಾಲುಂಡಿ ಗ್ರಾಮದ ಜನರು ಅಸ್ವಸ್ಥಗೊಂಡಿದ್ದಾರೆ. ಗ್ರಾಮದಲ್ಲಿ 2 ಜನರಿಗೆ ಕಾಲರಾ ಕಾಣಿಸಿಕೊಂಡಿದೆ. ಗ್ರಾಮದಲ್ಲಿ ಆರೋಗ್ಯ ಇಲಾಖೆ ತಂಡ ಬೀಡು ಬಿಟ್ಟಿದ್ದು, ಜನರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts