More

    ಕೇಂದ್ರಕ್ಕೆ ಕಳುಹಿಸಿದರೆ ಮೀಸಲು ಅನುಮೋದನೆ ಖಚಿತ ಎಂದ ನಾರಾಯಣಸ್ವಾಮಿ

    ಕಲಬುರಗಿ: ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ನೀಡಿರುವ ಮೀಸಲಾತಿ ಪ್ರಮಾಣ ಹೆಚ್ಚಿಸಲು ನಿರ್ಧರಿಸಿರುವುದಕ್ಕೆ ಯಾವುದೇ ಸಮಸ್ಯೆಯಿಲ್ಲ. ಅದರ ಲಾಭವನ್ನು ಶೋಷಿತ ಸಮುದಾಯಗಳ ಜನರು ನಿರಾತಂಕವಾಗಿ ಪಡೆಯಬಹುದಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.
    ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಡಾ.ಅಂಬೇಡ್ಕರ್ ಸೆಂಟರ್ ಆಫ್ ಎಕ್ಸಲೆನ್ಸ್ ಸೋಮವಾರ ಉದ್ಘಾಟಿಸಿದ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಸರ್ಕಾರದ ಸಚಿವ ಸಂಪುಟದಲ್ಲಿ ಒಕ್ಕೊರಲ ನಿರ್ಧಾರ ಕೈಗೊಂಡಿದ್ದು, ಕೇಂದ್ರಕ್ಕೆ ಕಳುಹಿಸಿಕೊಟ್ಟರೆ ಅನುಮೋದನೆ ನೀಡುವುದಾಗಿ ಭರವಸೆ ನೀಡಿದರು.
    ಶೇ.೫೦ ಕ್ಕಿಂತಲೂ ಮೀಸಲಾತಿ ಪ್ರಮಾಣ ಹೆಚ್ಚಾಗಬಾರದು ಎಂದಿದೆ. ಆದರೆ, ೨-೩ ರಾಜ್ಯಗಳಲ್ಲಿ ಶೇ.೬೯ರಷ್ಟು ಮೀಸಲಾತಿ ನೀಡಲಾಗಿದೆ. ಶೆಡ್ಯೂಲ್-೯ ಅಡಿಯಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಲು ಅವಕಾಶವಿರುವುದರಿಂದ ರಾಜ್ಯ ಸರ್ಕಾರ ಪ್ರಸ್ತಾವನೆಯು ಬರುವುದರಿಂದ ಅದರಡಿ ಸೇರಿಸಿ ಅನುಮೋದನೆ ನೀಡಲಾಗುವುದು. ಹೀಗಾಗಿ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಮೀಸಲಾತಿಯನ್ನು ಅನುಭವಿಸಬಹುದಾಗಿದೆ. ಹೆಚ್ಚಿಸಿರುವ ಮೀಸಲಾತಿ ಯಾವ ಸಮುದಾಯಕ್ಕೆ ನೀಡಬೇಕು ಎಂಬ ಚರ್ಚೆ ನಡೆದಿದ್ದು, ರಾಜ್ಯ ಸರ್ಕಾರ ಮತ್ತು ಪರಿಣಿತರು ಸೇರಿಕೊಂಡು ನಿರ್ಧರಿಸಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಶೆಡ್ಯೂಲ್-೯ ಕುರಿತು ಸುಪ್ರೀಂಕೋರ್ಟ್ ತೀರ್ಪುಗಳು ಬಂದಿಲ್ಲ. ಅಲ್ಲದೆ ಅದಕ್ಕೆ ಇದುವರೆಗೂ ಕೇಂದ್ರ ಸರ್ಕಾರವಾಗಲಿ, ಸುಪ್ರೀಂಕೋರ್ಟ್ ಆಗಲಿ ವ್ಯಾಖ್ಯಾನ ಮಾಡಿಲ್ಲ. ಹೀಗಾಗಿ ಮೀಸಲಾತಿ ಲಾಭ ಅಬಾದಿತರವಾಗಿರುತ್ತದೆ ಎಂದು ಕೇಂದ್ರ ಸಚಿವರು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts