More

    ಕೇಂದ್ರದ ಕ್ರಮಕ್ಕೆ ಈರಣ್ಣ ಕಡಾಡಿ ಹರ್ಷ

    ಮೂಡಲಗಿ: ದೇಶಾದ್ಯಂತ ಮುಂದಿನ 5 ವರ್ಷಗಳಲ್ಲಿ 2 ಲಕ್ಷ ಪ್ರಾಥಮಿಕ ಕಷಿ ಕ್ರೆಡಿಟ್ ಸೊಸೈಟಿ, ಹೈನುಗಾರಿಕೆ, ಮೀನುಗಾರಿಕೆ ಸಹಕಾರ ಸಂಘವನ್ನು ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವುದಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸ್ವಾಗತಿಸಿದ್ದಾರೆ.

    ಗುರುವಾರ ಪ್ರಕಟಣೆ ಹೊರಡಿಸಿರುವ ಅವರು, ದೇಶದಲ್ಲಿ 98,995 ಪ್ರಾಥಮಿಕ ಕಷಿ ಕ್ರೆಡಿಟ್ ಸೊಸೈಟಿ ಇದ್ದು 13 ಕೋಟಿ ಸದಸ್ಯರನ್ನು ಹೊಂದಿದೆ. 1,99,182 ಪ್ರಾಥಮಿಕ ಡೈರಿ ಸಹಕಾರಿ ಸಂಘಗಳು ಇದ್ದು 1.5 ಕೋಟಿ ಸದಸ್ಯರನ್ನು ಹೊಂದಿದೆ. 25,297 ಪ್ರಾಥಮಿಕ ಮೀನುಗಾರಿಕಾ ಸಹಕಾರ ಸಂಘಗಳು ಇದ್ದು 33 ಲಕ್ಷ ಸದಸ್ಯರನ್ನು ಹೊಂದಿದೆ ಎಂದರು.

    ದೇಶದಲ್ಲಿ 1.6 ಲಕ್ಷ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಪ್ರಾಥಮಿಕ ಕಷಿ ಕ್ರೆಡಿಟ್ ಸೊಸೈಟಿಗಳು ಇಲ್ಲ ಮತ್ತು 2 ಲಕ್ಷ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಹೈನುಗಾರಿಕೆ ಸಹಕಾರಿ ಸಂಘಗಳು ಇಲ್ಲ. ಈ ಹಿನ್ನೆಲೆಯಲ್ಲಿ ಪ್ರತಿ ಪಂಚಾಯಿತಿಗೆ ಒಂದರಂತೆ ಸಂಘವನ್ನು ಸ್ಥಾಪಿಸುವ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ. ಹೊಸ ಸಹಕಾರಿ ಸಂಘಗಳ ಸ್ಥಾಪನೆಯಿಂದ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸಷ್ಟಿಯಾಗಲಿದೆ ಎಂದರು.

    ಪ್ರತಿ ಗ್ರಾಪಂ ಮಟ್ಟದಲ್ಲಿ ಸ್ಥಾಪನೆಯಾಗುವ ಕಷಿ ಕ್ರೆಡಿಟ್ ಸೊಸೈಟಿಗಳು ರೈತರಿಗೆ ಸಣ್ಣಪುಟ್ಟ ಹಣಕಾಸಿನ ಅಗತ್ಯಗಳನ್ನು ಸುಲಭವಾಗಿ ಪೂರೈಸುವ ಮೂಲಕ ಕಷಿ ಸಾಲ ನೀಡಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆ ಉಂಟು ಮಾಡುವ ಸಾಧ್ಯತೆ ಇದೆ. ಸಹಕಾರ ಕ್ಷೇತ್ರವನ್ನು ಬಲಪಡಿಸಲು ನಿಟ್ಟಿನಲ್ಲಿ ತೆಗೆದುಕೊಂಡ ಐತಿಹಾಸಿಕ ನಿರ್ಧಾರದಿಂದ ರೈತರಲ್ಲಿ ಮಂದಹಾಸ ತಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಷಾ ಅವರನ್ನು ರೈತರ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts