More

    ಕೇಂದ್ರ ಗೃಹ ಸಚಿವರ ರಾಜೀನಾಮೆಗೆ ಆಗ್ರಹ

    ಗದಗ: ದೆಹಲಿ ಹಿಂಸಾಚಾರದ ನೈತಿಕ ಹೊಣೆಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

    ಗುಜರಾತ್ ಗೃಹ ಸಚಿವರಾಗಿದ್ದಾಗ ಅಮಿತ್ ಷಾ ಅವರು ಸೋಹ್ರಾಬುದ್ದೀನ್ ಎನ್​ಕೌಂಟರ್ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿ ಇದ್ದರು. ಅದರ ವಿಚಾರಣೆ ನಡೆಸುವ ನ್ಯಾಯಾಧೀಶರು ಸಂಶಯಾಸ್ಪದವಾಗಿ ಮರಣ ಹೊಂದಿದ್ದರು. ಈ ಕುರಿತು ದೇಶಾದ್ಯಂತ ಪ್ರತಿಭಟನೆಗಳು ನಡೆದವು. ಇದೀಗ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರವು ವ್ಯವಸ್ಥಿತವಾಗಿ ರೂಪಗೊಂಡಿದೆ. ರಾಷ್ಟ್ರದ ರಾಜಧಾನಿಯಲ್ಲಿ ನಡೆದ ಹಿಂಸಾಚಾರವನ್ನು ತಡೆಗಟ್ಟುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಜನರಲ್ಲಿ ಭಯದ ವಾತಾವರಣ ನಿರ್ವಣಗೊಂಡಿದೆ. ಆದ್ದರಿಂದ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಲಾಗಿದೆ.

    ಈ ಸಂದರ್ಭದಲ್ಲಿ ಒಮರ್ ಫಾರೂಕ್ ಹುಬ್ಬಳ್ಳಿ, ಮಹಮ್ಮದ ಹನೀಫ್ ಶಾಲಗಾರ, ಮಹಮ್ಮದ ಯೂಸೂಫ್ ನಮಾಜಿ, ಇಲಿಯಾಸ್ ಕೈರಾತಿ, ಅನ್ವರ್ ಶಿರಹಟ್ಟಿ, ಸಯ್ಯದ್ ಜಾಫರ್, ಅಮೀನ್​ಸಾಬ ಧಾರವಾಡ, ಹುಸೇನ್​ಸಾಬ ಕಾಗದಗಾರ, ಜೂನಸಾಬ ಮಂಗಳೂರ, ಗೌಸ್ ಹುಯಿಲಗೋಳ, ಸಮೀರ್ ಕುನ್ನಿಭಾವಿ, ಉಸ್ಮಾನ್ ಚಿತ್ತಾಪೂರ, ಅಶ್ರಫ್​ಅಲಿ ಸಯ್ಯದ್, ಹುಸೇನ್​ಸಾಬ ಕಾಗದಕಾರ, ರಾಜೇಸಾಬ ಕಾಗದಗಾರ, ಅಶ್ರಫ್​ಅಲಿ ಸಯ್ಯದ್ ಮತ್ತಿತರರು ಇದ್ದರು.

    ಪ್ರಚೋದನಾತ್ಮಕ ಹೇಳಿಕೆಯಿಂದ ಗಲಭೆ

    ಗದಗ: ದೆಹಲಿಯಲ್ಲಿ ನಡೆದ ಹಿಂಸಾಚಾರ ತಡೆಯುವಲ್ಲಿ ವಿಫಲರಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯ ಅಧ್ಯಕ್ಷ ಎಸ್.ಆರ್. ಹಿರೇಮಠ ಆಗ್ರಹಿಸಿದರು. ನಗರದಲ್ಲಿ ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸಂದರ್ಭದಲ್ಲಿ ಕೇಂದ್ರ ಸಚಿವರು ನೀಡಿರುವ ಪ್ರಚೋದನಾತ್ಮಕ ಹೇಳಿಕೆಗಳೇ ಗಲಭೆಗೆ ಕಾರಣವಾಗಿವೆ ಎಂದರು. ಸಿಎಎ ಪರ- ವಿರೋಧದ ಹಿಂಸಾಚಾರದಲ್ಲಿ ಇಲ್ಲಿವರೆಗೆ 26 ಮಂದಿ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಒಬ್ಬ ಅಧಿಕಾರಿ ಸಹ ಮೃತಪಟ್ಟಿರುವುದು ಘಟನೆಯ ಭೀಕರತೆ ತೋರಿಸುತ್ತದೆ ಎಂದರು. ರಾಜಧಾನಿ ದೆಹಲಿ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿ ಸಿಎಎ ವಿರುದ್ಧ ಭಾರಿ ಪ್ರತಿಭಟನೆಗಳು ನಡೆಯುತ್ತಿವೆ. ಅನೇಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೂ ಸಹ ಇದನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಆರೋಪಿಸಿದರು. ದೇಶದಲ್ಲಿನ ನಿರುದ್ಯೋಗ, ಜಿಡಿಪಿ ಕುಸಿತ ಎದುರಾಗಿರುವ ಈ ಸಂದರ್ಭದಲ್ಲಿ ಸಿಎಎ, ಎನ್​ಆರ್​ಸಿ ಹಾಗೂ ಎನ್​ಪಿಆರ್ ನೋಂದಣಿಗಳು ಅನಗತ್ಯ. ಇದರಿಂದ ದೇಶದ ಜನರಲ್ಲಿ ಧಾರ್ವಿುಕವಾಗಿ ದ್ವೇಷ ಭಾವನೆ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಸಾಮರಸ್ಯ ಭಾವನೆಯನ್ನು ಗಟ್ಟಿಗೊಳಿಸಲು ಸಂತ- ಶರಣರ ಸಂದೇಶ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts