More

    ಕೇಂದ್ರ-ರಾಜ್ಯ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿ

    ಚಿತ್ರದುರ್ಗ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿವೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ಕರ್ನಾಟಕ ಸರ್ವೋದಯ ಪಕ್ಷದ ಅಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಮನವಿ ಮಾಡಿದರು.

    ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತರ ಸಾಲ ಮನ್ನಾ, ಸ್ವಾಮಿನಾಥನ್ ವರದಿ ಜಾರಿಗೊಳಿಸುವುದಾಗಿ ಹೇಳಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದವರು ಈವರೆಗೂ ಭರವಸೆ ಈಡೇರಿಸಿಲ್ಲ. ಅತಿವೃಷ್ಟಿ ಪರಿಹಾರವೂ ಬಿಡುಗಡೆಯಾಗಿಲ್ಲ ಎಂದು ದೂರಿದರು.

    ಎನ್‌ಡಿಎ ಮೈತ್ರಿಕೂಟ ಜನರ ದಿಕ್ಕು ತಪ್ಪಿಸುತ್ತಿದೆ. ಈ ಕುರಿತು ಜಾಗೃತಿ ಮೂಡಿಸಲು ಪಕ್ಷ ಸಜ್ಜಾಗಿದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಈ ಬಾರಿ ಸ್ಪರ್ಧಿಸುತ್ತಿದ್ದೇನೆ. ಜನಾಶೀರ್ವಾದದ ವಿಶ್ವಾಸದಲ್ಲಿದ್ದೇನೆ ಎಂದು ಹೇಳಿದರು.

    ರೈತರು ಸಾವಿರಾರು ಕೋಟಿ ರೂ. ಬೆಳೆವಿಮೆ ಕಟ್ಟಿದ್ದಾರೆ. ಆದರೆ, ಬೆಳೆ ನಷ್ಟದ ಪರಿಹಾರ ಅನ್ನದಾತರ ಕೈ ಸೇರಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆಗೊಳಿಸಿಲ್ಲ. ಬಿಜೆಪಿ ಧರ್ಮ-ದೇವರ ಹೆಸರಿನಲ್ಲಿ ಚುನಾವಣೆ ಎದುರಿಸಲು ಮುಂದಾಗಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನ ಉಳಿಯುವುದಿಲ್ಲ. ಅದಕ್ಕಾಗಿ ಎಚ್ಚರಿಕೆಯಿಂದ ಮತ ಚಲಾಯಿಸಿ ಎಂದು ಕೋರಿದರು.

    ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಯಾದವರೆಡ್ಡಿ, ರೈತ ಸಂಘದ ಮುಖಂಡರಾದ ಬಸ್ತಿಹಳ್ಳಿ ಜಿ.ಸುರೇಶ್‌ಬಾಬು, ಕೆ.ಪಿ.ಭೂತಯ್ಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts