More

    ಎಲ್ಲಿ ಹೋಯಿತು ನಿಮ್ಮ ‘ಅಚ್ಛೇ ದಿನ್’ – ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ಕರೊನಾ ಸೋಂಕು ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಲವಾಗಿದ್ದು, ಬೀದಿ ಬೀದಿಗಳಲ್ಲಿ ಹೆಣ ಸುಡುವಂತಾಗಿದೆ. ಎಲ್ಲಿ ಹೋಯಿತು ನಿಮ್ಮ ‘ಅಚ್ಛೇ ದಿನ್’ ಎಂದು ಕೆಪಿಸಿಸಿ ವಕ್ತಾರೆ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ.

    ಕರೊನಾ ಮೊದಲ ಅಲೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್‌ಬರುವಿಕೆಗಾಗಿ ಜನರು ಇನ್ನೂ ಕಾಯುತ್ತಿದ್ದಾರೆ. ನಮಗೆ ‘ಅಚ್ಛೇ ದಿನ್’ ಬೇಡ. 2013ರಲ್ಲಿ ಇದ್ದಂತಹ ದಿನಗಳೇ ಇದ್ದರೆ ಸಾಕು ಎಂದು ಜನರು ಕೈಮುಗಿದು ಕೇಳುತ್ತಿದ್ದಾರೆ ಎಂದಿದ್ದಾರೆ. ರಾಜ್ಯದಲ್ಲಿ ಯಾವುದಕ್ಕೂ ಲಗಾಮಿಲ್ಲ. ಜನತಾ ಕರ್ಯ್ೂ ನಗೆಪಾಟಲಿಗೀಡಾಗಿದೆ. ಆಕ್ಸಿಜನ್ ಇಲ್ಲದೆ ಜನರು ಸಾಯುತ್ತಿದ್ದಾರೆ. ಯಾವ ಸಚಿವರೂ ಕೆಲಸ ಮಾಡುತ್ತಿಲ್ಲ. ಯಾರಿಗೆ ಯಾವ ಜವಾಬ್ದಾರಿ ವಹಿಸಲಾಗಿದೆ ಎಂಬುದೇ ಅರ್ಥವಾಗುತ್ತಿಲ್ಲ.

    ಬಾಗಲಕೋಟೆ ಜಿಲ್ಲೆಯ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಲಾಗಿದೆ. ಅವರ ಬಗ್ಗೆ ಗೌರವ ಇದೆ. ಆದರೆ, ಅವರಿಗೆ ನಮ್ಮ ಜಿಲ್ಲೆಯ ಬಗ್ಗೆ ಮಾಹಿತಿಯೇ ಇಲ್ಲ. ಬೆಳಗಾವಿ ಜಿಲ್ಲೆಯಲ್ಲಿ ನಾಲ್ವರು ಮಂತ್ರಿಗಳಿದ್ದರೂ ಯಾರೊಬ್ಬರೂ ಸಮರ್ಥರಿಲ್ಲ ಎಂದು ಬೇರೆ ಜಿಲ್ಲೆಯವರನ್ನು ಉಸ್ತುವಾರಿ ಮಾಡಿದಂತಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಟೀಕಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts