More

    ಕೇಂದ್ರ ಸಚಿವರನ್ನು ತಲುಪಿದ ರಾಜ್ಯದ ಈರುಳ್ಳಿ ರೈತರ ಕಳವಳ

    ಬೆಂಗಳೂರು: ಈರುಳ್ಳಿ ಬೆಲೆ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ರಫ್ತು ನಿಷೇಧ ಹೇರಿರುವುದರಿಂದ ರಾಜ್ಯದ ಈರುಳ್ಳಿ ಬೆಳೆಗಾರರಲ್ಲಿ ಕಳವಳ ಉಂಟಾಗಿದೆ.

    ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಈರುಳ್ಳಿ ಬೆಳೆಗಾರರಿಗೆ ಈ ತೀರ್ಮಾನದಿಂದ ದೊಡ್ಡ ಪ್ರಮಾಣದಲ್ಲಿ ನಷ್ಟವಾಗುವ ಸಾಧ್ಯತೆಯೂ ಇದೆ. ರೈತರು ತಮ್ಮ ಸಂಕಟವನ್ನು ಜನ ಪ್ರತಿನಿಧಿಗಳ ಕಿವಿಗೆ ತಲುಪಿಸಿದ್ದು, ಕೂಡಲೇ ನೆರವಿಗೆ ಧಾವಿಸುವಂತೆ ಕೋರಿದ್ದಾರೆ.

    ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಈ ವಿಚಾರವಾಗಿ ಕೇಂದ್ರದ ಗಮನ ಸೆಳೆಯಲು ಪತ್ರ ಬರೆದಿದ್ದಾರೆ. ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ರೋಜ್ ತಳಿಯ ಈರುಳ್ಳಿ ಬೆಳೆಯುತ್ತಿದ್ದು, ರಫ್ತು ನಿಷೇಧದಿಂದ ರೈತರಿಗೆ ಸಮಸ್ಯೆಯಾಗಬಹುದು, ಹೀಗಾಗಿ ಈ ತಳಿಗೆ ವಿನಾಯಿತಿ ನೀಡುವಂತೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts