More

    ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಕೈ ಕಿಡಿ

    ಬೀದರ್: ಕೇಂದ್ರ ಸರ್ಕಾರದ ಪರಿಶಿಷ್ಟ ಜಾತಿಞ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿರೋಧಿ ನೀತಿ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಯಿತು. ಇಲ್ಲಿಯ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಮುಖಂಡರು, ಕಾರ್ಯಕರ್ತರು, ದಲಿತ, ಹಿಂದುಳಿದ ಸಮುದಾಯವನ್ನು ಮೇಲೆತ್ತುವ ಬದಲು ಬಿಜೆಪಿ ಸರ್ಕಾ ರ ದಮನ ಮಾಡಲು ಹೊರಟಿದೆ ಎಂದು ಕಿಡಿಕಾರಿದರು. ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಮೊಳಗಿಸಿದರು.
    ಸಂವಿಧಾನದ ಕಲಂ 16ರ ಅಡಿಯಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗದವರಿಗೆ ಸರ್ಕಾರಿ ಹುದ್ದೆಗಳ ನೇರ ನೇಮಕ ಮತ್ತು ಬಡ್ತಿಯಲ್ಲಿ ಮೀಸಲು ಕೊಡಲಾಗಿದೆ. ಆದರೆ ಕೇಂದ್ರವು ಈ ಹಕ್ಕನ್ನು ಸಂರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಿ ಹುದ್ದೆಗಳ ನೇರ ನೇಮಕ ಮತ್ತು ಬಡ್ತಿ ಮೀಸಲಾತಿ ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳ ಮೂಲಭೂತ ಹಕ್ಕು ಅಲ್ಲ ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದೆ. ಕೇಂದ್ರವು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸುವಲ್ಲಿ ವಿಫಲವಾಗಿದೆ ಎಂದು ದೂರಿದರು.
    ಪ್ರತಿಭಟನೆ ನಂತರ ಡಿಸಿ ಕಚೇರಿಗೆ ತೆರಳಿ ರಾಷ್ಟ್ರಪತಿಗೆ ಬರೆದ ಮನವಿ ಪತ್ರ ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಪಕ್ಷದ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ, ಎಂಎಲ್ಸಿ ಅರವಿಂದಕುಮಾರ ಅರಳಿ, ಪ್ರಮುಖರಾದ ನರಸಿಂಗರಾವ ಸೂರ್ಯವಂಶಿ, ಆನಂದ ದೇವಪ್ಪ, ಅಮೃತರಾವ ಚಿಮಕೋಡೆ, ಚಂದ್ರಕಾಂತ ಹಿಪ್ಪಳಗಾಂವ, ಶಂಕರ ದೊಡ್ಡಿ, ಮೀನಾಕ್ಷಿ ಸಂಗ್ರಾಮ, ಶಿವರಾಜ ಹಾಸನಕರ್, ದತ್ತಾತ್ರಿ ಮೂಲಗೆ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts