More

    ಕೇರಳದಿಂದ ಆಗಮಿಸಿದ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆ

    ಕಾರವಾರ: ಜಿಲ್ಲೆಯಲ್ಲಿ ಕೇರಳ ರಾಜ್ಯದಿಂದ ಆಗಮಿಸಿದ 396 ವಿದ್ಯಾರ್ಥಿಗಳ ಗಂಟಲ ದ್ರವದ ಪರೀಕ್ಷೆ ಮಾಡಲಾಗಿದ್ದು, 250 ಮಾದರಿಗಳು ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ.

    ಮಾಧ್ಯಮದ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕೇರಳದಲ್ಲಿ ಕರೊನಾ ಹೆಚ್ಚಿರುವ ಹಿನ್ನೆಲೆಯಲ್ಲಿ ಅಲ್ಲಿಂದ ಬರುವವರಿಗೆ ಆರ್​ಟಿಪಿಸಿಆರ್ ಯಂತ್ರದ ಕೋವಿಡ್ ಪರೀಕ್ಷಾ ವರದಿಯನ್ನು ಕಡ್ಡಾಯ ಮಾಡಲಾಗಿದೆ. ಜಿಲ್ಲೆಯ ಸಿದ್ದಾಪುರ, ಅಂಕೋಲಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ನರ್ಸಿಂಗ್ ಕಾಲೇಜ್​ಗಳಿಗೆ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಅವರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ. ಮಹಾರಾಷ್ಟ್ರದಿಂದ ಆಗಮಿಸುವವರ ಕೋವಿಡ್ ಪರೀಕ್ಷೆ ಮಾಡುವ ಬಗ್ಗೆ ಸರ್ಕಾರದಿಂದ ಯಾವುದೇ ಮಾರ್ಗಸೂಚಿ ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts