

ಮೈಸೂರು: ಕೇರಳದ ಕೊಟ್ಟಿಯೂರು ದೇವಸ್ಥಾನಕ್ಕೆ ತೆರಳಿದ್ದ ಮೈಸೂರಿನ ಜಿಮ್ ಟ್ರೈನರ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಮೇಟಗಳ್ಳಿಯ ನಿವಾಸಿ ಅನಂತ ಭೂಷಣ್(33) ಮೃತರು. ಕೇರಳ-ಕರ್ನಾಟಕ ಗಡಿ ಬಾವಲಿ ಸಮೀಪದ ಕಾಟಿಕೊಳಂ ಬಳಿ ಈ ಅಪಘಾತ ಸಂಭವಿಸಿದೆ.
ಬಸ್ನ ಡ್ಯಾಶ್ ಬೋರ್ಡ್ನಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮೈಸೂರಿನ ಸಿದ್ಧಾರ್ಥನಗರದಲ್ಲಿರುವ ಜಿಮ್ನಲ್ಲಿ ತರಬೇತುದಾರರಾಗಿ ಕೆಲಸ ಮಾಡುತ್ತಿದ್ದ ಅನಂತ್ ಭೂಷಣ್ ಅವರು ಜು.1ರಂದು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಕೇರಳದ ಕೊಟ್ಟಿಯೂರು ದೇವಸ್ಥಾನಕ್ಕೆ ತೆರಳಿದ್ದರು.
ಬೈಕಿನಲ್ಲಿ ವಾಪಸ್ ಬರುವಾಗ ಎದುರಿಗೆ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದಿದ್ದು, ಬಸ್ನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸಂಬಂಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.