More

    ಕೇರ್ ಸೆಂಟರ್ ಆದ ಬಿಜಿಎಂಎಲ್ ಆಸ್ಪತ್ರೆ

    ಕೆಜಿಎಫ್: 23 ವಷರ್ಗಳಿಂದ ಬಳಕೆಯಾಗದೆ ಪಾಳು ಬಿದ್ದಿದ್ದ ಬಿಜಿಎಂಎಲ್ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಮಾರ್ಪಾಡು ಮಾಡಿದ್ದು, ಬುಧವಾರದಿಂದ ಆಸ್ಪತ್ರೆ ಕಾರ್ಯ ನಿರ್ವಹಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ್ ಲಿಂಬಾವಳಿ ಹೇಳಿದರು.
    ಕೆಜಿಎಫ್ ನಗರದ ಬಿಜಿಎಂಎಲ್ ಕೋವಿಡ್ ಕೇರ್ ಸೆಂಟರ್ ಅನ್ನು ಮಂಗಳವಾರ ಲೋಕಾರ್ಪಣೆ ಮಾಡಿ ಆಸ್ಪತ್ರೆಯಲ್ಲಿನ ಬೆಡ್ ವ್ಯವಸೆ,್ಥ ಮೂಲ ಸೌಕರ್ಯ ಪರಿಶೀಲಿಸಿ ಮಾತನಾಡಿ, ಸೋಂಕು ದೃಢಪಟ್ಟರೂ ಸೌಮ್ಯ ಲಕ್ಷಣ ಹೊಂದಿರುವವರಿಗೆ ಕಾಳಜಿ ಕೇಂದ್ರದಲ್ಲಿ ಚಿಕಿತ್ಸೆ ನೀಡುವುದರಿಂದ ಶೀಘ್ರ ಗುಣಮುಖರಾಗಲು ಸಾಧ್ಯ ಎಂದರು.

    ಕೇರ್ ಸೆಂಟರ್‌ನಲ್ಲಿ ಸರ್ಕಾರ ಮತ್ತು ಸ್ವಯಂಸೇವಕ ಡಾಕ್ಟರ್ ಕೆಲಸ ಮಾಡುತ್ತಾರೆ. ಅವರಿಗೆ ಸರ್ಕಾರ ಗೌರವಧನ ನೀಡುತ್ತದೆ. ಆಸ್ಪತ್ರೆಯಲ್ಲಿ ಪ್ರಾರಂಭಿಕವಾಗಿ 250 ಹಾಸಿಗೆ ಹಾಕಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಿ, ಆಕ್ಸಿಜನ್ ಪ್ಲಾಂಟ್ ಸಹ ನಿರ್ಮಿಸಲಾಗುತ್ತದೆ ಎಂದರು.

    ಸಂಸದ ಎಸ್.ಮುನಿಸ್ವಾಮಿ ಆಸ್ಪತ್ರೆಯ ಮೂಲಸೌಕರ್ಯ ಮತ್ತು ಸ್ವಚ್ಛತಾ ಕಾರ್ಯದ ಬಗ್ಗೆ ಮಾಹಿತಿ ನೀಡಿದರು. ಮಾಜಿ ಶಾಸಕ ವೈ. ಸಂಪಂಗಿ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಪಂ ಸಿಇಒ ಎನ್.ಎಂ. ನಾಗರಾಜ್, ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಇಲಾಕಿಯಾ ಕರುಣಾಕರನ್, ಉಪ ವಿಬಾಗಾಧಿಕಾರಿ ಸೋಮಶೇಖರ್, ವೈದ್ಯಾಧಿಕಾರಿ ಶಿವಕುಮಾರ್, ಬಿಜೆಪಿ ಜಿಲ್ಲಾ ಪ್ರಭಾರಿ ಜಯಚಂದ್ರಾರೆಡ್ಡಿ, ಜಿಲ್ಲಾಧ್ಯಕ್ಷ ಡಾ.ಕೆ.ಎನ್. ವೇಣುಗೋಪಾಲ್, ತಾಲೂಕು ಅಧ್ಯಕ್ಷ ಜಯಪ್ರಕಾಶ್‌ನಾಯ್ಡು, ಕಮಲನಾಥ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts