More

    ಕೈಗಾರಿಕೆಗೆ ಆಕ್ಸಿಜನ್ ಪೂರೈಕೆ ಆಯಾ ಜಿಲ್ಲಾಡಳಿತಕ್ಕೆ ಜವಾಬ್ದಾರಿ

    ಹುಬ್ಬಳ್ಳಿ: ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಆಸ್ಪತ್ರೆಗಳಿಗೆ ಆಕ್ಸಿಜನ್ ಸಿಲಿಂಡರ್ ಹೆಚ್ಚು ಬೇಕಾಗಿದೆ. ಇದರಿಂದ ಕೈಗಾರಿಕೆ ಉದ್ದೇಶಕ್ಕೆ ಕೊರತೆಯಾಗಿದೆ. ಸಮರ್ಪಕ ನಿರ್ವಹಣೆಗೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.

    ಹುಬ್ಬಳ್ಳಿ ಸಮೀಪ ಇಂಗಳಹಳ್ಳಿಯಲ್ಲಿ ಗುರುವಾರ ಶಾಲಾ ಕೊಠಡಿ ನಿರ್ವಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಕರೊನಾ ಸಂಕಷ್ಟದ ಸಂದರ್ಭದಲ್ಲಿ ಮೊದಲು ಆರೋಗ್ಯಕ್ಕೆ ಆದ್ಯತೆ ನೀಡಲಾಗಿದೆ. ಇದೀಗ ಆಕ್ಸಿಜನ್ ಸಿಲಿಂಡರ್ ಉತ್ಪಾದನೆಗೂ ಹೆಚ್ಚು ಒತ್ತು ನೀಡಲಾಗಿದೆ. ಪ್ರತಿ ಜಿಲ್ಲೆಯಲ್ಲಿ ಅಲ್ಲಿನ ಅಗತ್ಯಕ್ಕೆ ತಕ್ಕಂತೆ ಉತ್ಪಾದನೆ ಹೆಚ್ಚಿನ ಬೇಡಿಕೆ ಪೂರೈಸಲು ಜಿಲ್ಲಾಧಿಕಾರಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.

    ಇನ್ವೆಸ್ಟ್ ಕರ್ನಾಟಕ ಸಮ್ಮೇಳನದ ನಂತರ ರಾಜ್ಯಕ್ಕೆ ಕೈಗಾರಿಕೆಗಳು ಬರುವ ನಿರೀಕ್ಷೆ ಹೆಚ್ಚಾಗಿದೆ. ಅದೇ ರೀತಿ ಎಫ್​ಎಂಸಿಜಿ ಕ್ಲಸ್ಟರ್ ಬಗ್ಗೆ ನಿರ್ಧಾರ ಕೈಗೊಳ್ಳಲು ವಿಜನ್ ಗ್ರುಪ್ ರಚಿಸಲಾಗಿದ್ದು, ಅದರ ನೇತೃತ್ವ ವಹಿಸಿರುವ ಉಲ್ಲಾಸ ಕಾಮತ್ ಅವರ ವರದಿ ಆಧಾರದಲ್ಲಿ ಮುಂದಿನ ನಿರ್ಣಯ ಕೈಗೊಳ್ಳುತ್ತೇವೆ ಎಂದು ಉತ್ತರಿಸಿದರು.

    ಕರೊನಾ ಹಿನ್ನೆಲೆಯಲ್ಲಿ ಅಧಿವೇಶನ ಹೇಗೆ ನಡೆಸಬೇಕೆಂಬುದನ್ನು ಸಭಾಧ್ಯಕ್ಷರು ನಿರ್ಣಯಿಸುತ್ತಾರೆ. ಅಲ್ಲದೆ, ಎಲ್ಲ ಶಾಸಕರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಬರಲು ಸಭಾಧ್ಯಕ್ಷರು ಸೂಚಿಸಿದ್ದಾರೆ ಎಂದು ಶೆಟ್ಟರ್ ಪ್ರತಿಕ್ರಿಯಿಸಿದರು. ಹುಬ್ಬಳ್ಳಿಯ ಕಿಮ್ಸ್​ನಲ್ಲೂ ಜಯದೇವ ಹೃದ್ರೋಗ ಕೇಂದ್ರದ ಘಟಕ ಸ್ಥಾಪನೆಗೆ ನಮ್ಮ ಪ್ರಯತ್ನ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts