More

    ಕೈಗಾರಿಕೆ ಪ್ರದೇಶದಲ್ಲಿ ಮೂಲ ಸೌಕರ್ಯ ಕಲ್ಪಿಸಿ

    ವಿಜಯಪುರ: ನಗರ ಹೊರವಲಯದ ಅಲಿಯಾಬಾದ್ ಹಂತ-1 ಹಾಗೂ ಹಂತ-2ರ ಕೈಗಾರಿಕೆ ಪ್ರದೇಶದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಕೈಗೊಂಡ ಕಾಮಗಾರಿಗಳನ್ನು ತಕ್ಷಣಕ್ಕೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಸಂಬಂಧಿಸಿದ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಈಗಾಗಲೇ ಶೇ. 85 ರಷ್ಟು ಕಾಮಗಾರಿ ಕೈಗೊಳ್ಳಲಾಗಿದ್ದು ಬಾಕಿ ಇರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದ ಅವರು, ಬ.ಬಾಗೇವಾಡಿ ತಾಲೂಕಿನ ಮುಳವಾಡ ಗ್ರಾಮದಲ್ಲಿ ಸುಮಾರು 564 ಜಮೀನಿನಲ್ಲಿ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿಗಳು ಶೇ.90 ರಷ್ಟು ಪೂರ್ಣಗೊಂಡಿದ್ದು, ಇನ್ನುಳಿದ ಕಾಮಗಾರಿಗಳು ತಿಂಗಳ ಅಂತ್ಯಕ್ಕೆ ಪೂರ್ಣಗೊಳಿಸುವಂತೆ ಸೂಚಿಸಿದರು.

    ಅದರಂತೆ ಮುಳವಾಡ ಗ್ರಾಮದ ಮೊದಲ ಹಂತದ ಕಾಮಗಾರಿಗೆ ಸಂಬಂಧಿಸಿದಂತೆ ಸಿವಿಲ್ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಶೀಘ್ರವಾಗಿ ವಿದ್ಯುತ್ ಸೌಲಭ್ಯ ಕಲ್ಪಿಸಲು ಅನುಕೂಲವಾಗುವಂತೆ ವಿದ್ಯುತ್ ಇಲಾಖೆಯ ಸಂಬಂಧಪಟ್ಟ ಅಭಿಯಂತರರು ನವೆಂಬರ್ ಅಂತ್ಯದಲ್ಲಿ ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಹಾಗೂ ಜನವರಿಯಲ್ಲಿ ವಿದ್ಯುತ್‌ಗೆ ಸಂಬಂಧಿಸಿದಂತೆ ಕಾಮಗಾರಿಗಳನ್ನು ಪ್ರಾರಂಭಿಸಬೇಕು ಎಂದು ಸೂಚಿಸಿದರು.

    ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಲು ಕೆಐಎಡಿಬಿ ಅಲಿಯಾಬಾದ್-2 ಕೈಗಾರಿಕಾ ಪ್ರದೇಶದ 1.27 ಎಕರೆ ಜಮೀನನ್ನು ಉಚಿತವಾಗಿ ಹಂಚಿಕೆ ಮಾಡಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಒಪ್ಪಿಗೆ ಸೂಚಿಸಿದ್ದು, ಕೆಲವು ದಿನಗಳಲ್ಲಿ ಪ್ರಾರಂಭಿಸಲಾಗುತ್ತದೆ ಎಂದರು.

    ಕೈಗಾರಿಕೋದ್ಯಮಿಗಳ ಸಮಸ್ಯೆ: ಜಿಲ್ಲೆಯಲ್ಲಿ ವಿವಿಧ ಕೈಗಾರಿಕೋದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಸಿಂದಗಿ ತಾಲೂಕು ಸಣ್ಣ ಕೈಗಾರಿಕೆ ಉದ್ಯಮಿದಾರರು ಹಾಗೂ ಸೇವಾ ಸಂಸ್ಥೆಗಳ ವತಿಯಿಂದ ಕೋರಲಾದ ಮೂಲ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಂಡಿದ್ದು. ಸಿಂದಗಿ ಕೈಗಾರಿಕಾ ವಸಾಹತುವಿನಲ್ಲಿ 458.20 ಚಮೀ ಜಾಗವನ್ನು ನಿಗಮದ ನಿಯಮಾವಳಿಯಂತೆ ದರ ಆಕರಿಸಿ ಹಂಚಿಕೆ ಪತ್ರಗಳನ್ನು ನೀಡಲಾಗಿದೆ ಎಂದು ಸಭೆಗೆ ತಿಳಿಸಿದರು.

    ಮುಳವಾಡ ಹಂತ-1ರಲ್ಲಿ ಮೂಲ ಸೌಕರ್ಯಗಳ ಕಾಮಗಾರಿ ಪೂರ್ಣ ಪ್ರಮಾಣದಲ್ಲಿ ಮುಕ್ತಾಯಗೊಂಡ ನಂತರ ನಿವೇಶನ ಹಂಚಿಕೆಯ ಅರ್ಜಿಯನ್ನು ಸರ್ಕಾರದ ನಿರ್ದೇಶನ ಹಾಗೂ ಮಾರ್ಗಸೂಚಿಯಂತೆ ಹಂಚಿಕೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

    ಸಿಂದಗಿ ತಾಲೂಕಿನ ಸಣ್ಣ ಕೈಗಾರಿಕಾ ಉದ್ಯಮದಾರರ ನಿವೇಶನ ಅಳತೆಗಳನ್ನು ಸರಿಪಡಿಸಿ ನಿವೇಶನಗಳ ಸರಹದ್ದನ್ನು ಹೊಸದಾಗಿ ಸಮೀಕ್ಷೆ ಮಾಡಿಸಬೇಕು ಹಾಗೂ ಅಲ್ಲಿನ ನೀರನ ಸೌಲಭ್ಯಗಳಿಗಾಗಿ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಮತ್ತು ವಿದ್ಯುತ್ ಸಮಸ್ಯೆಯನ್ನು ಪೂರ್ಣ ಪ್ರಮಾಣದಲ್ಲಿ ಬಗೆಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

    ಮಲಘಾಣ ಗ್ರಾಮದಲ್ಲಿ ಬೆಲ್ಲ ತಯಾರಿಕಾ ಘಟಕ ಸ್ಥಾಪನೆಗೆ ಹಾಗೂ 12 ಜನರಿಗೆ ಉದ್ಯೋಗಾವಕಾಶ ನೀಡಲು ಮೆ.ಮಹಾಲಕ್ಷ್ಮಿ ಜಾಗೇರಿಗೆ 1 ಎಕರೆ ಪ್ರದೇಶವನ್ನು ಕೈಗಾರಿಕಾ ಉದ್ದೇಶಕ್ಕೆ, ಹೆಸ್ಕಾಂದಿಂದ 30ಕೆವಿಎ ವಿದ್ಯುತ್ ಮಂಜೂರಾತಿಗೆ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಇಂದು ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ.ಸಿದ್ದಣ್ಣ ಮತ್ತಿತರರಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts