More

    ಕೈಗಾರಿಕೆ ಸ್ನೇಹಿ ವಾತಾವರಣ ನಿರ್ಮಿಸಿ

    ಬೀದರ್: ಜಿಲ್ಲೆಯಲ್ಲಿ ಕೈಗಾರಿಕೋದ್ಯಮ ಸ್ನೇಹಿ ವಾತಾವರಣ ನಿರ್ಮಾಣಕ್ಕೆ ಆದ್ಯತೆ ಕೊಡಬೇಕು ಎಂದು ಜಿಲ್ಲಾ ಮಟ್ಟದ ಏಕಗವಾಕ್ಷಿ ಒಪ್ಪಿಗೆ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಹೇಳಿದರು.
    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಏಕಗವಾಕ್ಷಿ ಒಪ್ಪಿಗೆ ಸಮಿತಿ ಸಭೆಯಲ್ಲಿ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ(ಎಂಎಸ್ಎಂಇ) ಕೈಗಾರಿಕೆಗಳ ಪುನಶ್ಚೇತನಕ್ಕಾಗಿ ಕರೊನಾ ಗ್ವಾರಂಟೆಡ್ ಯಮರ್ಜೆನ್ಸಿ ಕ್ರೆಡಿಟ್ ಲೈನ್ (ಜಿಇಸಿಎಲ್) ಸಾಧಿಸಿದ ಬಗ್ಗೆ ಪ್ರಗತಿ ಪರಿಶೀಲಿಸಿ ಮಾತನಾಡಿ, ಎಂಎಸ್ಎಂಇ ಘಟಕಗಳಿಗೆ ಕೇಂದ್ರ ಸರ್ಕಾರದ ಸಿಜಿಟಿಎಂಎಸ್ಇ ಅಡಿಯಲ್ಲಿ ನೀಡಿದ ಸಾಲ ಮಂಜೂರಿ ಮತ್ತು ಬ್ಯಾಂಕ್​ಗಳಿಗೆ ನೀಡಿದ ಗುರಿ ಸಾಧನೆಯನ್ನು ಸಮರ್ಪಕ ನಿರ್ವಹಿಸುವಲ್ಲಿ ಮುತುವರ್ಜಿ ವಹಿಸಬೇಕು ಎಂದು ಸೂಚಿಸಿದರು.
    ಜಿಲ್ಲಾ ಮಟ್ಟದ ಏಕಗವಾಕ್ಷಿ ಒಪ್ಪಿಗೆ ಸಮಿತಿ ಸದಸ್ಯ ಕಾರ್ಯದರ್ಶಿಯೂ ಆದ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕಿ ಸುರೇಖಾ ಮುನವಳ್ಳಿ ಮಾತನಾಡಿ, ಕೇಂದ್ರ ಸರ್ಕಾರ 3 ಲಕ್ಷ ಕೋಟಿ ರೂ. ಪ್ಯಾಕೇಜ್ ಅನ್ನು ಎಂಎಸ್ಎಂಇ ಕೈಗಾರಿಕೆಗಳ ಪುನಶ್ಚೇತನಕ್ಕೆ ಗ್ವಾರಂಟೆಡ್ ಯಮರ್ಜೆನ್ಸಿ ಕ್ರೆಡಿಟ್ ಲೈನ್ (ಜಿಇಸಿಎಲ್) ಜಾರಿ ತಂದಿದೆ. ಈ ಕುರಿತು ಈಗಾಗಲೇ ಜಿಲ್ಲೆಯಲ್ಲಿರುವ ಬ್ಯಾಂಕ್ ಅಧಿಕಾರಿಗಳಿಗೆ ಹಾಗೂ ಪ್ರಮುಖ ಉದ್ದಿಮೆದಾರರೊಂದಿಗೆ ಜಾಗೃತಿ ಶಿಬಿರ ನಡೆಸಲಾಗಿದೆ. ಈ ಯೋಜನೆಯಡಿ ಜುಲೈ 20ರವರೆಗೆ ಜಿಲ್ಲೆಯ ವಿವಿಧ ಬ್ಯಾಂಕುಗಳಿಂದ 3426 ಕೈಗಾರಿಕಾ ಘಟಕಗಳಿಗೆ 4155.77 ಲಕ್ಷ ರೂ. ಮಂಜೂರಿಯಾಗಿದ್ದು, ಇದರಲ್ಲಿ 3694.27 ಲಕ್ಷ ರೂ. ಬಿಡುಗಡೆ ಆಗಿದೆ ಎಂದು ಮಾಹಿತಿ ನೀಡಿದರು. ಈಗಾಗಲೇ ಮಂಜೂರಿಯಾದ ಅನುದಾನ ಕಾಲಮಿತಿಯೊಳಗೆ ಬಳಸಲು ಮತ್ತು ಗುರಿ ಸಾಧನೆಗೆ ಒತ್ತು ಕೊಡಬೇಕು ಎಂದು ಡಿಸಿ ನಿರ್ದೇಶನ ನೀಡಿದರು.
    ಬೀದರ್ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಬಿ.ಜಿ.ಶೆಟಕಾರ, ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಶಿವರಾಜ ಹಲಶೆಟ್ಟಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೈಗಾರಿಕೋದ್ಯಮಗಳ ಸಂಘದ ಅಧ್ಯಕ್ಷ ವಿಜಯಕುಮಾರ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ.ಎಂ. ಕಮತಗಿ, ಕೆಎಸ್ಎಫ್ಸಿ ಶಾಖಾ ವ್ಯವಸ್ಥಾಪಕರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts