More

    ‘ಕೈ’ಬಿಟ್ಟು ‘ಕಮಲ’ ಹಿಡಿದ ಕೊಟ್ರೇಶ ಚಿಲಕಾ

    ಗಜೇಂದ್ರಗಡ: ಪ್ರಧಾನಿ ನರೇಂದ್ರ ಮೋದಿ ಹಾಗೂ ಶಾಸಕ ಕಳಕಪ್ಪ ಬಂಡಿ ಅವರ ಆಡಳಿತವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇನೆ ಎಂದು ಪದ್ಮಸಾಲಿ ಸಮಾಜದ ಅಧ್ಯಕ್ಷ ಕೊಟ್ರೇಶ ಚಿಲಕಾ ಹೇಳಿದರು.

    ಪಟ್ಟಣದ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಭಾನುವಾರ ಸಂಜೆ 40 ಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ಶಾಸಕ ಕಳಕಪ್ಪ ಬಂಡಿ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಅವರು ಮಾತನಾಡಿದರು.

    ‘ಕಾಂಗ್ರೆಸ್ ಪಕ್ಷ ಸಂಘಟನೆ ಜತೆಗೆ ಮಾಜಿ ಶಾಸಕ ಜಿ.ಎಸ್. ಪಾಟೀಲ್ ಅವರ ಆಪ್ತ ಕಾರ್ಯದರ್ಶಿಯಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದೇನೆ. ಆದರೆ, ಕಾಂಗ್ರೆಸ್​ನಲ್ಲಿ ನಾನು ಮಾಡಿದ ಕೆಲಸಕ್ಕೆ ಬೆಲೆ ಇಲ್ಲದಂತಾಯಿತು. ಹೀಗಾಗಿ ಮನನೊಂದು ಕಾಂಗ್ರೆಸ್ ಪಕ್ಷ ತ್ಯಜಿಸಿ ಶಾಸಕ ಕಳಕಪ್ಪ ಬಂಡಿ ಅವರ ಅಭಿವೃದ್ಧಿ ಕಾರ್ಯ ಮೆಚ್ಚಿಕೊಂಡು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ’ ಎಂದರು.

    ಶಾಸಕ ಕಳಕಪ್ಪ ಬಂಡಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ರೈತರು, ಕಾರ್ವಿುಕರು ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಹತ್ತಾರು ಕಾರ್ಯಗಳನ್ನು ಜಾರಿಗೆ ತರಲಾಗುತ್ತಿದೆ ಎಂದರು.

    ಅಶೋಕ ವನ್ನಾಲ, ಮುತ್ತಣ್ಣ ಕಡಗದ, ಕನಕಪ್ಪ ಅರಳಿಗಿಡದ, ಮುದಿಯಪ್ಪ ಮುಧೋಳ, ಬಿ.ಎಂ. ಸಜ್ಜನ, ಮೋಹನಸಾ ರಾಯಬಾಗಿ, ಸುಭಾನಸಾಬ ಆರಗಿದ್ದಿ, ಭಾಸ್ಕರ ರಾಯಬಾಗಿ, ಶರಣಪ್ಪ ರೇವಡಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts