More

    ಕೈ ಅಭ್ಯರ್ಥಿ ಬೆಂಬಲಿಸುವಂತೆ ಮಾಜಿ ಎಂಎಲ್‌ಸಿ ಮರಿತಿಬ್ಬೇಗೌಡ ಮನವಿ

    ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳ ಮೂಲಕ ಎಲ್ಲಾ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಆದರೆ ಬಿಜೆಪಿ ಕೊಟ್ಟ ಭರವಸೆಗಳನ್ನು ಈಡೇರಿಸದೆ ಜನರಿಗೆ ಅನ್ಯಾಯ ಮಾಡಿದೆ. ಆದ್ದರಿಂದ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಜಿಲ್ಲೆಯ ಮತದಾರರು ಬೆಂಬಲಿಸಬೇಕು ಎಂದುವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇ ಗೌಡ ಮನವಿ ಮಾಡಿದರು.
    ಪ್ರಧಾನಿ ನರೇಂದ್ರ ಮೋದಿಯವರು 10 ವರ್ಷ ಆಡಳಿತ ನಡೆಸಿದ್ದಾರೆ. ಆದರೆ ಜನರಿಗೆ ತಾವು ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆಯಲ್ಲಿ ಯಾವುದನ್ನು ಪೂರೈಕೆ ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ. ಅಲ್ಲದೆ ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿ ಅವರು ಭಾಷಣ ಮಾಡಿದ್ದಾರೆ. ಆದರೆ ಅವರು ತಮ್ಮ ಭಾಷಣದಲ್ಲಿ ರಾಜ್ಯಕ್ಕೆ ಯಾವ ಕೊಡುಗೆ ನೀಡಿದ್ದಾರೆ ಎಂಬುದನ್ನು ಹೇಳಲಿಲ್ಲ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
    ಕೇಂದ್ರ ಸರ್ಕಾರ ರಾಜ್ಯದಲ್ಲಿ ಬರ ಪರಿಹಾರದಲ್ಲಿ ಹಾಗೂ ನೀರಾವರಿ ಯೋಜನೆ ವಿಚಾರದಲ್ಲಿ ಸಾಕಷ್ಟು ಅನ್ಯಾಯ ಮಾಡಿದೆ. ಬಡವರು ರೈತರು ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಬರ ಪರಿಹಾರವನ್ನು ಪಡೆದುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿಕಾರಿದರು.
    ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲ ಭರವಸೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಎಲ್ಲ ವರ್ಗದ ಜನರಿಗೆ ಅನುಕೂಲ ಮಾಡಿಕೊಡಲಾಗಿದೆ. ರಾಜ್ಯದಲ್ಲಿ ಈಗಾಗಲೇ ಬದಲಾವಣೆಯ ಗಾಳಿ ಬೀಸಿದೆ. ಜಿಲ್ಲೆಯಲ್ಲೂ ಕೂಡ ಈ ಬಾರಿ ಕುಟುಂಬ ರಾಜಕಾರಣದಿಂದ ಬೇಸತ್ತು ಈ ಬಾರಿ ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ಜನ ತೀರ್ಮಾನಿಸಿದ್ದಾರೆ ಎಂದು ಹೇಳಿದರು.
    ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಈ.ಎಚ್. ಲಕ್ಷ್ಮಣ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಾವಗಲ್ ಮಂಜುನಾಥ್, ನಿವೃತ್ತ ಉಪನ್ಯಾಸಕರಾದ ಶಿವಣ್ಣಗೌಡ, ಮಂಜೇಗೌಡ, ರವಿಕುಮಾರ್ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts