More

    ಕೈ ಮುಗಿವೆ, ಜನರ ಜೀವ ಉಳಿಸಿ – ಡಿಸಿಎಂ ಲಕ್ಷ್ಮಣ ಸವದಿ

    ಬೆಳಗಾವಿ: ‘ವೈದ್ಯರು ಹಾಗೂ ಇತರ ಸಿಬ್ಬಂದಿ ಕರೊನಾ ಸೋಂಕಿತರಿಗೆ ಸಕಾಲಕ್ಕೆ ಸೂಕ್ತ ಚಿಕಿತ್ಸೆ ನೀಡಬೇಕು. ಇದರಿಂದ ಅವರಲ್ಲಿ ಮನೋಬಲ ಹೆಚ್ಚುತ್ತದೆ. ಜಿಲ್ಲೆಯ ಸಾಮಾನ್ಯ ವ್ಯಕ್ತಿಯಾಗಿ ಕೈ ಮುಗಿದು ನಿಮ್ಮಲ್ಲಿ ಪ್ರಾರ್ಥಿಸುತ್ತೇನೆ. ಜನರ ಜೀವ ರಕ್ಷಣೆಗೆ ಮುಂದಾಗಿ.. ಇದು, ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಬಿಮ್ಸ್ ಸಿಬ್ಬಂದಿಯಲ್ಲಿ ಕೋರಿಕೊಂಡ ಪರಿ.

    ಕೋವಿಡ್-19 ನಿಯಂತ್ರಣ ಹಾಗೂ ಚಿಕಿತ್ಸೆ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ರಾಜ್ಯದ ಇತರ ಜಿಲ್ಲಾಸ್ಪತ್ರೆಗಳಿಗೆ ಹೋಲಿಸಿದರೆ ನಮ್ಮ ಬಿಮ್ಸ್ ನಲ್ಲಿ ಸಮರ್ಪಕ ನಿರ್ವಹಣೆ ಇಲ್ಲ. ಐಸಿಯೂ ಸಹ ಸರಿಯಾಗಿ ಕೆಲಸ ಮಾಡುತ್ತಿಲ್ಲ. ವಾರ್ಡ್ ಹಾಗೂ ಐಸಿಯುಗಳಲ್ಲಿ ಸ್ವಚ್ಛತೆ ಇಲ್ಲ ಎಂದು ಬಿಮ್ಸ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

    ಸ್ವಚ್ಛತೆಗೆ ಕ್ರಮ: ಈ ವೇಳೆ ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ಮಾತನಾಡಿ, ಸೋಂಕಿತರಿಗೆ ತುರ್ತು ಸಂದರ್ಭದಲ್ಲಿ ಹೆಚ್ಚಿನ ಆಕ್ಸಿಜನ್ ಪೂರೈಕೆ ಮಾಡಲು ಅನುಕೂಲವಾಗಲೆಂದು ಆಕ್ಸಿಜನ್ ಘಟಕ ಸಮೀಪದ ಹಳೇ ವಾರ್ಡ್ ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಾರ್ಡ್‌ಗಳು ಅಸ್ವಚ್ಛತೆಯಿಂದ ಕೂಡಿವೆ. ಹೊಸ ವಾರ್ಡ್‌ಗಳಲ್ಲಿ ಸಮಸ್ಯೆಯಿಲ್ಲ. 60-70 ವರ್ಷದ ಹಳೇ ಕಟ್ಟಡ ಆಗಿದ್ದರಿಂದ ನಿರ್ವಹಣೆ ಕಷ್ಟವಾಗುತ್ತಿದೆ. ಸ್ವಚ್ಛತೆಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

    ಕ್ಯಾಮರಾ ಅಳವಡಿಸಿ: ಪ್ರತಿದಿನ ಮೂರು ಪಾಳಿಯಲ್ಲಿ ವೈದ್ಯರು, ಇತರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ನಿಗಾ ವಹಿಸಬೇಕು. ಎಲ್ಲ ವಾರ್ಡ್‌ಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಬೇಕು. ಆ ಮೂಲಕ ಮೂರು ಪಾಳಿಗಳಲ್ಲಿ ಎಲ್ಲರೂ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ನಿಗಾ ವಹಿಸಲು ಹಿರಿಯ ಅಧಿಕಾರಿಗಳ ತಂಡ ರಚಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಡಿಸಿಎಂ ಸೂಚನೆ ನೀಡಿದರು.

    ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಪಂ ಸಿಇಒ ದರ್ಶನ. ಎಚ್.ವಿ., ಎಸ್ಪಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ವಿ. ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ, ನಗರ ಪೊಲೀಸ್ ಆಯುಕ್ತ ಡಾ. ಕೆ.ತ್ಯಾಗರಾಜನ್, ಬಿಮ್ಸ್‌ನ ವಿವಿಧ ವಿಭಾಗಗಳ ಮುಖ್ಯಸ್ಥರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts