More

    ಕೊಗನೊಳ್ಳಿ ಚೆಕ್‌ಪೋಸ್ಟ್‌ಗೆ ಎಡಿಜಿಪಿ ಭೇಟಿ

    ನಿಪ್ಪಾಣಿ: ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ಭುಗಿಲೆದ್ದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆ ಕರೊನಾ ನಿಯಂತ್ರಣ ಉಸ್ತುವಾರಿಯಾಗಿರುವ ಆಂತರಿಕ ಭದ್ರತೆ ವಿಭಾಗದ ಎಡಿಜಿಪಿ ಭಾಸ್ಕರ ರಾವ್ ಅವರು ತಾಲೂಕಿನ ಕೊಗನೊಳ್ಳಿ ಚೆಕ್‌ಪೋಸ್ಟ್‌ಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

    ಚೆಕ್‌ಪೋಸ್ಟ್‌ನಲ್ಲಿ ಕಾರ್ಯನಿರತ ಪೊಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರೊಂದಿಗೆ ಮಾತನಾಡಿ ಅಗತ್ಯ ಸಲಹೆ-ಸೂಚನೆ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಜನರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಚೆಕ್‌ಪೋಸ್ಟ್‌ನಲ್ಲಿ ಕಾರ್ಯನಿರತ ಸಿಬ್ಬಂದಿ ಕರ್ತವ್ಯ ಬಹುಮುಖ್ಯವಾಗಿರುತ್ತದೆ. ಬೆಳಗಾವಿ ಜಿಲ್ಲೆಯಲ್ಲಿ 14 ಚೆಕ್‌ಪೋಸ್ಟ್‌ಗಳಿದ್ದು, ಎಲ್ಲ ಸಿಬ್ಬಂದಿ 3 ಶಿಫ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯದ ಉತ್ತರದಲ್ಲಿರುವ ಕೊಗನೊಳ್ಳಿ ಚೆಕ್‌ಪೋಸ್ಟ್ ಬಹಳ ಮಹತ್ವದ ಚೆಕ್‌ಪೋಸ್ಟ್ ಆಗಿದೆ ಎಂದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಚಿಕ್ಕೋಡಿ ಡಿವೈಎಸ್ಪಿ ಮನೋಜಕುಮಾರ ನಾಯಕ್, ಸ್ಥಳೀಯ ಠಾಣೆಯ ಆರಕ್ಷಕ ವೃತ್ತ ನಿರೀಕ್ಷಕ ಸಂತೋಷ ಸತ್ಯನಾಯಕ್, ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಬಿ.ಎಸ್. ತಳವಾರ, ಶಹರ ಪೊಲೀಸ್ ಠಾಣೆಯ ಪಿಎಸ್‌ಐ ಅನಿಲ ಕುಂಬಾರ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts