More

    ಕೊನೆಗೂ ಬಸ್​ ನಿಲ್ದಾಣ ಉದ್ಘಾಟನೆ

    ಬೆಳಗಾವಿ: ಸ್ಮಾರ್ಟ್​ ಸಿಟಿಯ 15 ಕೋಟಿ ರೂ., ಕರ್ನಾಟಕ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 15 ಕೋಟಿ ರೂ.ಸೇರಿದಂತೆ ಒಟ್ಟು 30 ಕೋಟಿ ರೂ.ವೆಚ್ಚದಲ್ಲಿ ಕಳೆದ ಐದು ವರ್ಷಗಳಿಂದ ನಿರ್ಮಾಣವಾಗುತ್ತಿರುವ ಬೆಳಗಾವಿ ಕೇಂದ್ರ ಬಸ್​ ನಿಲ್ದಾಣವನ್ನು ಕಾಮಗಾರಿ ಮುಗಿಯುವ ಮುನ್ನವೇ ಮಂಗಳವಾರ ಉದ್ಘಾಟನೆಗೊಳಿಸಲಾಯಿತು.

    ಐದು ವರ್ಷಗಳಿಂದ ಕಟ್ಟದ ನಿರ್ಮಾಣ ಕಾಮಗಾರಿ ನಡೆಯುತ್ತಲೇ ಇದ್ದು, ವಿಳಂಬವಾಗುತ್ತಿರುವ ಕಾಮಗಾರಿಗೆ ವೇಗ ನೀಡಿ, ಕಾಮಗಾರಿ ಪೂರ್ಣಗೊಳಿಸುವಲ್ಲಿ ಆಸಕ್ತವಹಿಸದ ಅಧಿಕಾರಿಗಳು ತರಾತುರಿಯಲ್ಲಿ ಶೇ.70 ಕಾಮಗಾರಿ ನಡೆಯದಿರುವ ನೂತನ್​ ಬಸ್​ ನಿಲ್ದಾಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಉದ್ಘಾಟಿಸಿದ್ದಾರೆ. ಅಧಿಕಾರಿಗಳ ಈ ನಡೆಗೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ನಿಲ್ದಾಣ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಬೆಳಗಾವಿಯು ಕರ್ನಾಟಕದ ಮುಕುಟ ಇದ್ದಂತೆ. ಎನ್​ಡಬ್ಲೂಕೆಎಸ್​ಆರ್​ಟಿಸಿಯ ಬೆಳ್ಳಿ ಮಹೋತ್ಸವದ ಅಂಗವಾಗಿ 500 ನೂತನ ಬಸ್​ ಹಾಗೂ 500 ಸಿಬ್ಬಂದಿ ಒದಗಿಸಲಾಗುವುದು ಎಂದರು. ಮುಂಬರುವ ದಿನಗಳಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಲಾಗುವುದು, ನ್ಯೂನ್ಯತೆಗಳನ್ನು ಸರಿಪಡಿಸಿ, ಅನಗತ್ಯ ವೆಚ್ಚಕ್ಕೆ ಕಡಿವಾಣಹಾಕುವುದರ ಜತೆಗೆ ಸಿಬ್ಬಂದಿಗೆ ಹೆಚ್ಚಿನ ಸೌಲಭ್ಯ ಒದಗಿಸಲಾಗುವುದು. ಶಾಲಾ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯ ನೀಡುವ ಕುರಿತು ಚರ್ಚೆ ನಡೆದಿದ್ದು, ಶ್ರೀ ೂಷಿಸಲಾಗುವುದು ಎಂದರಲ್ಲದೇ, ಪುಣೆಗೆ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಬೆಳಗಾವಿ ಬಸ್​ ನಿಲ್ದಾಣದಲ್ಲಿ ಕಳೆದ ಸಮಯ ಸ್ಮರಿಸಿಕೊಂಡರು.

    ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು, ಸಂಸದೆ ಮಂಗಲ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ, ದುಯೋರ್ಧನ ಐಹೊಳೆ, ಅನಿಲ ಬೆನಕೆ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೇರಿದಂತೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts