More

    ಕೊಳೆಗೇರಿ ನಿವಾಸಿಗಳಿಗಾಗಿ 1,600 ಮನೆ ನಿರ್ಮಾಣ

    ರಾಣೆಬೆನ್ನೂರ: ಕರೊನಾ ವೈರಸ್ ಜೊತೆಗೆ ನಾವುಗಳು ದಿನಗಳನ್ನು ಕಳೆಯಬೇಕಾದ ಅನಿವಾರ್ಯತೆ ಎದುರಾಗಿದೆ. ಕರೊನಾಕ್ಕೆ ಯಾರೂ ಭಯಪಡುವ ಅವಶ್ಯಕತೆಯಿಲ್ಲ. ವೈರಸ್​ನ್ನು ಹೋಗಲಾಡಿಸಲು ಎಲ್ಲರೂ ಒಟ್ಟಾಗಿ ಹೋರಾಟ ನಡೆಸಬೇಕು ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.

    ಇಲ್ಲಿನ ನಗರಸಭೆ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ 74ನೇ ಸ್ವಾತಂತ್ರ್ಯೊತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ನಗರದಲ್ಲಿ ಕೊಳೆಗೇರಿ ನಿವಾಸಿಗಳಿಗೆ 7 ಲಕ್ಷ ರೂ.ಗಳ ವೆಚ್ಚದಲ್ಲಿ 1,600 ವಸತಿ ಮನೆಗಳನ್ನು ನಿರ್ಮಿಸಲಾಗುವುದು. ಅಡವಿ ಆಂಜನೇಯ ಬಡಾವಣೆಯ ನಿವೇಶನ ರಹಿತ 400 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗುವುದು. ಕಿತ್ತೂರ ರಾಣಿ ಚೆನ್ನಮ್ಮ ಶಾಲೆಯನ್ನು ಪ್ರಾರಂಭಿಸಲು ಅನುಮತಿ ದೊರತಿದೆ. ನಗರದಲ್ಲಿ 2ಕೋಟಿ ವೆಚ್ಚದಲ್ಲಿ ಬಾಬು ಜಗಜೀವನ ಸಮುದಾಯ ಭವನ ನಿರ್ಮಾಣ ಕಾರ್ಯ ಪ್ರಾರಂಭಿಸಲಾಗಿದೆ ಎಂದರು. ತಹಸೀಲ್ದಾರ್ ಬಸನಗೌಡ ಕೋಟೂರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

    ಸಮಾರಂಭದಲ್ಲಿ ಕರೊನಾ ವಾರಿಯರ್ಸ್​ಗಳನ್ನು ಸನ್ಮಾನಿಸಲಾಯಿತು. ಪಿಎಸ್​ಐ ಪ್ರಭು ಕೆಳಗಿನಮನಿ ಪಥ ಸಂಚಲನ ನಡೆಸಿಕೊಟ್ಟರು. ಸ್ವಾತಂತ್ರ್ಯ ಹೋರಾಟಗಾರ ಮೆಣಸಿನಹಾಳ ತಿಮ್ಮನಗೌಡ್ರ ಸೊಸೆ ಕುಸುಮಾದೇವಿ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಾನಂದ ಕನ್ನಪ್ಪಳವರ, ಸದಸ್ಯ ಏಕನಾಥ ಭಾನುವಳ್ಳಿ, ತಾಪಂ ಅಧ್ಯಕ್ಷೆ ಗೀತಾ ಲಮಾಣಿ, ಉಪಾಧ್ಯಕ್ಷೆ ಕಸ್ತೂರೆಮ್ಮ ಹೊನ್ನಾಳಿ, ಸದಸ್ಯ ಕರಿಯಪ್ಪ ತೋಟಗೇರ, ಎಪಿಎಂಸಿ ಅಧ್ಯಕ್ಷ ಬಸವರಾಜಪ್ಪ ಸವಣೂರ, ಪಿಎಲ್​ಡಿ ಬ್ಯಾಂಕ್ ಅಧ್ಯಕ್ಷ ನಾಗರಾಜ ಬಣಕಾರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚೋಳಪ್ಪ ಕಸವಾಳ, ಬಿಇಒ ಶ್ರೀಧರ ಎನ್., ಪೌರಾಯುಕ್ತ ಡಾ. ಮಹಾಂತೇಶ, ತಾಪಂ ಇಒ ಎಸ್.ಎಂ. ಕಾಂಬಳೆ, ಡಿವೈಎಸ್​ಪಿ ಡಾ. ವಿನೋದಕುಮಾರ ಮೋಕ್ತೆದಾರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts