More

    ಕೊಳ್ಳೇಗಾಲದಲ್ಲಿ ಪಟಾಕಿ ಖರೀದಿ ಜೋರು


    • ಚಾಮರಾಜನಗರ: ದೀಪಾವಳಿ ಹಿನ್ನೆಲೆಯಲ್ಲಿ ಕೊಳ್ಳೇಗಾಲ ಪಟ್ಟಣದಲ್ಲಿ ಪಟಾಕಿ ಮಾರಾಟ ಮಳಿಗೆಗಳು ತಲೆ ಎತ್ತಿವೆ. ಗ್ರಾಹಕರು ಪಟಾಕಿ ಖರೀದಿಗೆ ಮುಂದಾಗಿದ್ದಾರೆ. ಈ ಬಾರಿ ಹಸಿರು ಪಟಾಕಿ ಮಾರಾಟಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಲಿಸಿದೆ. ಅದರಂತೆ ಪಟ್ಟಣದ ಎಂಜಿಎಸ್‌ವಿ ಜೂನಿಯರ್ ಕಾಲೇಜು ಮೈದಾನದಲ್ಲಿ ಐದು ಹಸಿರು ಪಟಾಕಿ ಮಳಿಗೆಗಳನ್ನು ಹಾಕಲಾಗಿದೆ. ಹಬ್ಬಕ್ಕೆ ಎರಡು ದಿನ ಇರುವ ಮುನ್ನವೇ ಮಾರಾಟ ಜೋರಾಗಿದೆ.
      ಮಾರಾಟಕ್ಕೆ ಜಿಲ್ಲಾಡಳಿತ ಹಲವು ನಿಬಂಧನೆಗಳನ್ನು ಹಾಕಿದೆ. ನಿಯಮ ಮೀರಿದರೆ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ನೀಡಿದೆ. ಪ್ರತಿಯೊಂದು ಪಟಾಕಿ ಬಾಕ್ಸ್‌ಗಳ ಮೇಲೆ ಹಸಿರು ಚಿಹ್ನೆ ಮತ್ತು ಕ್ಯುಆರ್ ಕೋಡ್ ಕಡ್ಡಾಯವಾಗಿದೆ.

    • ನಗರಸಭೆ, ಪೊಲೀಸ್ ಇಲಾಖೆ ಹಾಗೂ ತಾಲೂಕು ಕಚೇರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಗತ್ಯ ಮುನ್ನೆಚರಿಕೆ ಕ್ರಮ ಅನುಸರಿಸಲು ಸೂಚಿಸಲಾಗಿದೆ. ನಗರಸಭೆ ಪ್ರಭಾರ ಆಯುಕ್ತ ಬಿ.ಆರ್.ಮಹೇಶ್ ಮಾತನಾಡಿ, ಜಿಲ್ಲಾಡಳಿತ ಆದೇಶದಂತೆ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈಗಾಗಲೇ ನಗರಸಭೆ ಹಾಗೂ ರೋಟರಿ ಸಂಸ್ಥೆಯಿಂದ ಪ್ರಚಾರ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವನ್ನೂ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts