More

    ಕೋಳಿ ಅಂಗಡಿಗಳ ಸ್ಥಳಾಂತರಕ್ಕೆ ಪಟ್ಟು

    ಆಲ್ದೂರು: ಪಟ್ಟಣದ ಸಂತೆ ಮೈದಾನದಲ್ಲಿ ಪಂಚಾಯಿತಿಯಿಂದ ನಿರ್ವಿುಸಿರುವ ಕೋಳಿ ಅಂಗಡಿಗಳಲ್ಲಿ ಸ್ವಚ್ಛತೆ ಇಲ್ಲದೆ ದುರ್ನಾತ ಬೀರುತ್ತಿದ್ದು ಅವುಗಳನ್ನು ಸ್ಥಳಾಂತರಿಸಬೇಕು ಎಂದು ಸ್ಥಳೀಯ ವಾಸಿಗಳು ಬುಧವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಸ್ವಚ್ಛತೆ ಕಾಪಾಡುವಲ್ಲಿ ಗ್ರಾಮ ಪಂಚಾಯಿತಿ ವಿಫಲವಾಗಿದೆ ಎಂದು ಹರಿಹಾಯ್ದರು. ಪ್ರತಿಭಟನೆಗೆ ಸ್ಥಳೀಯ ಸದಸ್ಯೆ ಮಮತಾ ಪ್ರತಿಭಟನೆಗೆ ತಡವಾಗಿ ಆಗಮಿಸಿದಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಸಮಸ್ಯೆ ಬಗೆಹರಿಸದೆ ಸಂಬಂಧವೇ ಇಲ್ಲವೆಂಬಂತೆ ತಡವಾಗಿ ಬಂದಿದ್ದಿರಾ ಎಂದು ತರಾಟೆಗೆ ತೆಗೆದುಕೊಂಡರು. ಸ್ಥಳಕ್ಕೆ ಅಧ್ಯಕ್ಷರನ್ನು ಕರೆಸಿ ಎಂದು ಪಟ್ಟು ಹಿಡಿದು ಗ್ರಾಪಂ ಅಧಿಕಾರಿಗಳು ಹಾಗೂ ಸದಸ್ಯರ ವಿರುದ್ಧ ಘೊಷಣೆಗಳನ್ನು ಕೂಗಿದರು. ಆಲ್ದೂರು ಪಿಎಸ್​ಐ ಸಜಿತ್ ಗೌಡ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ.

    ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಅಧ್ಯಕ್ಷೆ ಪೃಥ್ವಿ ಸಂತೋಷ್ ಮಾತನಾಡಿ, ಪಟ್ಟಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತಿದೆ. ಗ್ರಾಪಂ ಸಭೆಯಿದ್ದು ಸಮಸ್ಯೆಯನ್ನು ರ್ಚಚಿಸಲಾಗುವುದು. ಇದಕ್ಕೆ ಪರ್ಯಾಯ ಕ್ರಮ ಕೈಗೊಳ್ಳಲಾಗುವುದು ಎಂದರು. ಅಧ್ಯಕ್ಷರ ಮಾತಿಗೆ ಸಮಾಧಾನಗೊಳ್ಳದ ಪ್ರತಿಭಟನಾಕಾರರು 10 ವರ್ಷಗಳಿಂದ ಇದನ್ನೇ ಹೇಳುತ್ತಿದ್ದು ಯಾವುದೇ ಕ್ರಮ ಕೈಗೊಂಡಿಲ್ಲ. ತೀರ್ಮಾನ ಕೈಗೊಳ್ಳುವವರೆಗೆ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

    ಗ್ರಾಪಂ ಸಭೆಯಲ್ಲಿ ರ್ಚಚಿಸಿ ಕ್ರಮ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಸಂತೆ ಮೈದಾನದಲ್ಲಿರುವ ಕೋಳಿ ಅಂಗಡಿಗಳಿಗೆ ನೋಟಿಸ್ ನೀಡಿ ತಾತ್ಕಾಲಿಕವಾಗಿ ಅಂಗಡಿಗಳನ್ನು ಬಂದ್ ಮಾಡಿಸುತ್ತೇವೆ ಎಂದು ಅಭಿವೃದ್ಧಿ ಅಧಿಕಾರಿಗಳು ಭರವಸೆ ನೀಡಿದ ನಂತರ ಪ್ರತಿಭಟನೆ ನಿಲ್ಲಿಸಿದರು. ಸಮಸ್ಯೆಗೆ ಶಾಶ್ವತ ಪರಿಹಾರ ಕೈಗೊಳ್ಳದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ನಿವಾಸಿಗಳು ಎಚ್ಚರಿಕೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts