More

    ಕೋವಿಡ್ ಆಸ್ಪತ್ರೆಗೆ ಸಚಿವ ಶೆಟ್ಟರ್ ಭೇಟಿ

    ಹುಬ್ಬಳ್ಳಿ: ನಗರದ ಗೋಕುಲ ರಸ್ತೆ ಸಂಜೀವಿನಿ ಹಾಗೂ ಹೆಗ್ಗೇರಿ ಆಯುರ್ವೆದ ಕಾಲೇಜಿನಲ್ಲಿ ವ್ಯವಸ್ಥೆಗೊಳಿಸಿರುವ ಕೋವಿಡ್ 9 ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.

    ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಪ್ರಕರಣಗಳು ಹೆಚ್ಚುತ್ತಿದ್ದು, ಕಿಮ್ಸ್ನ ಕೋವಿಡ್ 9 ಆಸ್ಪತ್ರೆಯ ಜೊತೆಗೆ, ಕಡಿಮೆ ರೋಗ ಲಕ್ಷಣ ಇರುವವರ ಚಿಕಿತ್ಸೆಗೆ ಆಯುರ್ವೆದ ಕಾಲೇಜ್​ನಲ್ಲಿ ಕೋವಿಡ್ ಆಸ್ಪತ್ರೆಗಳನ್ನು ವ್ಯವಸ್ಥೆಗೊಳಿಸಲಾಗಿದೆ. ಕಿಮ್ಸ್ನಲ್ಲಿ 35 ವೆಂಟಿಲೇಟರ್ ಹಾಗೂ 250 ಹಾಸಿಗೆಗಳಿವೆ. ಕರೊನಾದಿಂದ ತೀವ್ರವಾಗಿ ಬಳಲುತ್ತಿರುವ ರೋಗಿಗಳಿಗೆ ಕಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಈ ವೇಳೆ ಸಚಿವರಿಗೆ ಮಾಹಿತಿ ನೀಡಿದರು. ಶಾಸಕ ಅರವಿಂದ ಬೆಲ್ಲದ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಡಿಎಚ್​ಒ ಡಾ. ಯಶವಂತ ಮದೀನಕರ, ಹುಬ್ಬಳ್ಳಿ ಶಹರ ತಹಶೀಲ್ದಾರ ಶಶಿಧರ ಮಾಡ್ಯಾಳ, ಆಯುರ್ವೆದ ಕಾಲೇಜಿನ ಪ್ರಾಚಾರ್ಯರಾದ ಡಾ. ಬನ್ನಿಗೋಳ, ಡಾ. ಪ್ರಶಾಂತ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts