More

    ಸಂತ್ರಸ್ತರ ಸಮಸ್ಯೆ ನಿವಾರಣೆಗೆ ಸಮಿತಿ ರಚನೆ

    ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆಯ ಹಿನ್ನೀರಿನಿಂದ ಬಾಧಿತಗೊಳಗಾದ ಬಾಗಲಕೋಟೆ ಸಂತ್ರಸ್ತರ ಸಮಸ್ಯೆ ನಿವಾರಣೆಗೆ ಬಿಟಿಡಿಎ ವಿಶೇಷ ಭೂಸ್ವಾಧೀನಾಧಿಕಾರಿ, ಪುನರ್ ವಸತಿ ಅಧಿಕಾರಿ ಹಾಗೂ ಮುಖ್ಯ ಅಭಿಯಂತರರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಬಿಟಿಡಿಎ ಅಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ ಹೇಳಿದರು.
    ನಗರದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
    ಬಾಡಿಗೆದಾರರ ನಿವೇಶನ ಹಂಚುವಾಗ ಮೊದಲ ಹಂತದ ಮುಳಗಡೆ ಪ್ರದೇಶಗಳಿಗೆ 1988-1995 ಹಾಗೂ ಎರಡನೇ ಹಂತದ ಮುಳಗಡೆ ಪ್ರದೇಶದಲ್ಲಿ 2002 ಮತ್ತು 2008 ಮತದಾರರ ಯಾದಿ ದೃಢಿಕರಿಸಿ ನಿವೇಶನ ನೀಡಲಾಗುತ್ತಿದೆ. ಆದರೇ ಅನೇಕ ಜನ ಸಂತ್ರಸ್ತರು ನಮಗೆ ನಿವೇಶನ ದೊರೆಯುತ್ತಿಲ್ಲ ಎಂದು ಹೇಳಿದ್ದಾರೆ. ಪ್ರಾಧಿಕಾರದ ನಿಯಮ ಮೀರುವಂತಿಲ್ಲ. ಹೀಗಾಗಿ ಅರ್ಜಿಗಳನ್ನು ಪರಿಶೀಲಿಸಿ ಸಂತ್ರಸ್ತರ ಸಮಸ್ಯೆ ಆಲಿಸಲು ಸಮಿತಿ ರಚಿಸಲು ಪ್ರಾಽಕಾರ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಹೇಳಿದರು.
    ನವನಗರ ಯುನಿಟ್-2 ರಲ್ಲಿರುವ 72 ವಾಣಿಜ್ಯ ಮಳಿಗೆಗಳನ್ನು ಹರಾಜು ಮಾಡಲು ನಿರ್ಣಯಿಸಲಾಗಿದೆ. ನವನಗರ ಯೂನಿಟ್ -3 ನಿರ್ಮಾಣಕ್ಕಾಗಿ ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆದರೇ 270 ಎಕರೆ ಜಮೀನು ಭೂಸ್ವಾಧೀನ ಪಡಿಸಿಕೊಳ್ಳಲು ವಿರೋಧ ವ್ಯಕ್ತಪಡಿಸಿ ಕೋರ್ಟ ಮೆಟ್ಟಿಲು ಹತ್ತಿದ್ದರು. ಹೈಕೋರ್ಟ ವಿಚಾರಣೆ ನಡೆಸಿ ತೀರ್ಪು ನೀಡಿದ್ದು, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಪರವಾಗಿ ತೀರ್ಪು ಬಂದಿದೆ. ಮೂಲೆ ನಿವೇಶನ ಹರಾಜಿನಿಂದ ಒಟ್ಟು 136 ಕೋಟಿ ರೂ. ಬಿಟಿಡಿಎಗೆ ಸಂದಾಯವಾಗಿದೆ. ಈ ವರೆಗೆ ಒಟ್ಟು 2023 ಹಕ್ಕು ಪತ್ರಗಳನ್ನು ಸಂತ್ರಸ್ತರಿಗೆ ವಿತರಿಸಲಾಗಿದೆ ಎಂದರು.
    ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಬಿಟಿಡಿಎ ಸದಸ್ಯರಾದ ಮೋಹನ ನಾಡಗೌಡ, ಶಿವಾನಂದ ಟವಳಿ, ಬಿಟಿಡಿಎ ಮಾಜಿ ಅಧ್ಯಕ್ಷ, ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಮುಖ್ಯ ಇಂಜಿನಿಯರ್ ಮನ್ಮಥಯ್ಯ ಸ್ವಾಮಿ, ಪುನರ್ ವಸತಿ ಅಽಕಾರಿ ಗಣಪತಿ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts